ಹಾಲು ಒಕ್ಕೂಟಕ್ಕೆ ಸದಸ್ಯರಾಗಿ ಶಂಕರಗೌಡ ಆಯ್ಕೆ
ಶಿಗ್ಗಾವಿ 15: ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಹಾವೇರಿ ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿಗೆ ತಾಲೂಕಿನ ಅತ್ತಿಗೇರಿ ಗ್ರಾಮದ ಶಂಕರಗೌಡ ಬಾಪೂಜಿಗೌಡ ಪಾಟೀಲ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೆ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಸರಕಾರದ ಸಹಕಾರಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.