ಸಮಸಮಾಜ ಕಟ್ಟುವಲ್ಲಿ ಶರಣರ ಕೊಡುಗೆ ಅಪಾರ: ಚಂದ್ರಶೇಖರ್ ನಾಯ್ಕ
Sharan's contribution to building an equal society is immense: Chandrashekhar Naik
ಬ್ಯಾಡಗಿ 11 : ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅಭಿಪ್ರಾಯ ಪಟ್ಟರು.ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿಯನ್ನು ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಾತನಾಡಿದರು.ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ
12ನೇ ಶತಮಾನವು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿ ಉಂಟುಮಾಡಿದೆ. ಇವತ್ತಿನ ನಮ್ಮ ಸಂವಿಧಾನದ ಪಾರ್ಲಿಮೆಂಟ್ ಮಾದರಿಯಲ್ಲಿ ಅಂದಿನ ಅನುಭವ ಮಂಟಪ ಇತ್ತು. ಯಾರನ್ನೂ ಕೀಳಾಗಿ ಕಾಣಬಾರದು ಎಂಬುವುದು ಬಸವೇಶ್ವರರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿದ್ದಾರೆ ಶರಣದ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 