ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಶೇಖರಗೌಡ ರಾಮತ್ನಾಳ

ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಶೇಖರಗೌಡ ರಾಮತ್ನಾಳ Shekhar Gowda Ramatnal visited various departments

            ಹಾವೇರಿ 26 : ನಗರದ ಜಿಲ್ಲಾ ಆಸ್ಪತ್ರೆ, ವಿವಿಧ ವಸತಿ ನಿಲಯಗಳಿಗೆ ಹಾಗೂ ವಿವಿಧ ಶಾಲೆಗಳಿಗೆ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ  ಶೇಖರಗೌಡ ರಾಮತ್ನಾಳ ಅವರು  ಭೇಟಿ ನೀಡಿ ಪರೀಶೀಲನೆ ನಡೆಸಿದರು.  

  ನಗರದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ವಸತಿ ನಿಲಯ ಹಾವೇರಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ವಸತಿ ನಿಲಯ ನಂ.1, ಭಾರತ ರತ್ನ ಡಾ.ಬಿ.ಆರ್‌.ಅಂಬೇಡ್ಕರ್ ವಸತಿ ಶಾಲೆ, ಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು,  ವಸತಿ ನಿಲಯಗಳಲ್ಲಿ ಮಕ್ಕಳಿಗೆ ಒದಗಿಸಲಾದ ಮೂಲಭೂತ ಸೌಕರ್ಯಗಳು, ಮಕ್ಕಳಿಗೆ ಮೆನು ಪ್ರಕಾರ ನೀಡಲಾದ ಆಹಾರದ ಬಗ್ಗೆ, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ ಸಂಖ್ಯೆ-1098, ಸಲಹಾ ಪೆಟ್ಟಿಗೆ ಮತ್ತು ಮಕ್ಕಳ ರಕ್ಷಣಾ ನೀತಿಯಲ್ಲಿನ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಪರೀಶೀಲಿಸಿದರು.  

         ಕಾರ್ಮಿಕ ಇಲಾಖೆ ಕಚೇರಿಯಲ್ಲಿ “ಕೂಲಿಗಲ್ಲ ಶಾಲೆ ಅಭಿಯಾನ” ಸಂಬಂಧ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ನಡೆಸಲಾದ ಹಠಾತ ದಾಳಿಗಳ ಬಗ್ಗೆ ಮತ್ತು ದಾಳಿಗಳಲ್ಲಿ ರಕ್ಷಿಸಲಾದ ಮಕ್ಕಳ ಪುನರ್ವಸತಿ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಚರ್ಚಿಸಿದರು ಹಾಗೂ  ಇನ್ನು ಹೆಚ್ಚಿನ ದಾಳಿಗಳನ್ನು ಮಾಡುವ ಮುಖಾಂತರ ಮಕ್ಕಳನ್ನು ರಕ್ಷಣೆ ಮಾಡುವಂತೆ  ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್‌., ಆಯಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು  ಸೇರಿದಂತೆ ಇತರರು ಉಪಸ್ಥಿತರಿದ್ದರು.