ಚಿಕ್ಕೋಡಿ 18: ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನ ಪರವಾಗಿ ಹೋರಾಟ ಮಾಡುವ ವ್ಯಕ್ತಿಗಳ ಜೊತೆ ಕುರುಬ ಸಮಾಜ ಇರಬೇಕು ವಿನಹ: ಮಹಾತ್ಮರ ಹೆಸರಿನಲ್ಲಿ ರಾಜಕೀಯ ಮಾಡಿ ಢೋಂಗಿತನ ಮಾಡುವ ವ್ಯಕ್ತಿಗಳ ಜೊತೆ ನಿಲ್ಲಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದಲ್ಲಿ ನಡೆದ ಚಿಕ್ಕೋಡಿ ಜಿಲ್ಲಾ ಮಟ್ಟದ 531 ನೇ ಕನಕದಾಸರ ಜಯಂತಿ ಉತ್ಸವ ಹಾಗೂ ಅಂತರರಾಜ್ಯ ಮಟ್ಟದ ಭವ್ಯ ಟಗರಿನ ಕಾಳಗ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಗೊಳ್ಳಿ ರಾಯಣ್ಣನ ಬಗ್ಗೆ ಗೊತ್ತಿಲದವರು ಬ್ರಿಗೆಡ್ ಸಂಘಟನೆ ಕಟ್ಟಿಕೊಂಡು ಮಾತ್ಮರ ಹೆಸರಿನಲ್ಲಿ ರಾಜಕೀಯ ಮಾಡಿ ಸುಳ್ಳುವ ಹೇಳುವವರ ಜೊತೆ ಕುರುಬ ಸಮಾಜ ನಿಲ್ಲಬಾರದೆಂದು ಪರೋಕ್ಷವಾಗಿ ಕೆ.ಎಸ್.ಈಶ್ವರಪ್ಪ ವಿರುದ್ಧ ಹರಿಹಾಯ್ದರು.
ಜಾತಿ ಧರ್ಮಕ್ಕೆ ಸಿಮೀತರಾಗದೇ ಗುಲಾಮಗಿರಿ ಪದ್ಧತಿಯನ್ನು ವಿರೋಧಿಸಿ ದಾಸ ಸಾಹಿತ್ಯದ ಮೂಲಕ ಜನರನ್ನು ಜಾಗೃತಿಗೊಳಿಸಿದ ಕೀತರ್ಿ ಕನಕದಾಸರಿಗೆ ಸಲ್ಲುತ್ತದೆ. ಕುರುಬ ಸಮಾಜ ಬಾಂದವರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಡಲು ಪ್ರಯತ್ನ ಮಾಡಬೇಕು. ನಾನು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಪ್ರತಿಯೊಬ್ಬರಿಗೆ ಸಾಮಾಜಿಕ ನ್ಯಾಯ ಸಿಗುವ ನಿಟ್ಟಿನಲ್ಲಿ ಅನ್ನಭಾಗ್ಯ, ಕೃಷಿ ಭಾಗ್ಯ, ಪಶುಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದೇನೆ ಎಂದರು.
ಈ ದೇಶದಲ್ಲಿ ಹಿಂದು, ಕ್ರಿಶ್ಚನ್, ಜೈನ್ ಮತ್ತು ಮುಸ್ಲಿಂ ಸೇರಿದಂತೆ ಅನೇಕ ಸಮುದಾಯಗಳಿವೆ. ಆದರೆ ಕೆಲವರು ಹಿಂದು ಹೆಸರಿನಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದು, ಅಂತವರ ಮಾತಿಗೆ ಕಿವಿಗೊಡಬಾರದು. ನಾನು ಒಬ್ಬ ಅಪ್ಪಟ ಹಿಂದು. ನಾನು ಎಲ್ಲರ ಜೊತೆ ಇರುತ್ತೇನೆ ಎಲ್ಲರನ್ನು ಪ್ರೀತಿಸುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕುರುಬ ಸಮುದಾಯದಲ್ಲಿ ಹುಟ್ಟಿದ ಸಿದ್ದರಾಮಯ್ಯನವರು ರಾಜ್ಯದಲ್ಲಿ ನೂರಾರು ಯೋಜನೆ ಕೊಟ್ಟು ತುಳಿತಕ್ಕೆ ಒಳಗಾದ ಜನರನ್ನು ಮೇಲೆಕ್ಕೆತ್ತುವ ಕೆಲಸ ಮಾಡಿರುವದರಿಂದ ಇಡೀ ರಾಜ್ಯದ ಜನತೆ ಸಿದ್ದರಾಮಯ್ಯನವರ ಪರವಾಗಿದೆ. ಇತ್ತೀಚೆಗೆ ನಡೆದ ಬಳ್ಳಾರಿ, ಜಮಖಂಡಿ ಉಪ ಚುನಾವಣೆಯಲ್ಲಿ ಟಗರು ಗುದ್ದಿರುವುದಕ್ಕೆ ಪ್ರತಿಪಕ್ಷ ಇನ್ನೂ ಚೇತರಿಸಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯನವರು ರಾಜ್ಯದಲ್ಲಿ 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಜನರ ಸೇವೆ ಮಾಡಲು ಮತ್ತೊಮ್ಮೆ ಮುಖ್ಯಮಂತ್ರಿ ಆಗಲು ಇಡೀ ಕುರುಬ ಸಮಾಜ ಸಿದ್ದರಾಮಯ್ಯನವರ ಪರವಾಗಿ ನಿಲ್ಲಬೇಕು ಎಂದರು.
ಸಂಸದ ಪ್ರಕಾಶ ಹುಕ್ಕೇರಿ ಮಾತನಾಡಿ, ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಗೆ 360 ಕೋಟಿ ಅನುದಾನ ನೀಡಿ ರಸ್ತೆಯನ್ನು ಅಗಲಿಕರಣ ಮಾಡಿದ ಶ್ರೇಯಸ್ಸು ಸಿದ್ಧರಾಮಯ್ಯನವರಿಗೆ ಸಲ್ಲುತ್ತದೆ. ಸಿದ್ದರಾಮಯ್ಯನವರ ಆಡಳಿತದಲ್ಲಿ ನಾನು ಸಚಿವನಾಗಿದ್ದ ವೇಳೆಯಲ್ಲಿ ಇಡೀ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳ ಜಿಣರ್ೋದ್ಧಾರಕ್ಕೆ ಅನುದಾನ ಒದಗಿಸಿದ್ದಾರೆ. ರಾಜ್ಯ ಹೆದ್ದಾರಿ ಪಕ್ಕದ ಹಳ್ಳಿಗಳಿಗೆ ವಿದ್ಯುತ್ ಕಂಬ ಅಳವಡಿಸಲು ಅನುದಾನ ಒದಗಿಸಿದ್ದಾರೆ. ಕರಗಾಂವ ಏತ ನೀರಾವರಿ ಯೋಜನೆಗೆ ಕಳೆದ ನಾಲ್ಕು ವರ್ಷಗಳಿಂದ ಸತತ ಪ್ರಯತ್ನ ಮಾಡಲಾಗಿದೆ. ಶೀಘ್ರವಾಗಿ ಮಂಜೂರು ಮಾಡಲು ಪ್ರಯತ್ನ ಮಾಡಲಾಗುತ್ತದೆ ಎಂದರು.
ಮಾಜಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಜನಪರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಿದ್ದರಾಮಯ್ಯನವರು ಜನಪ್ರೀಯ ಮುಖ್ಯಮಂತ್ರಿಯಾಗಿದ್ದರು. ಮಹಾತ್ಮರ ಜಯಂತಿ ಮಾಡಿದರೆ ಸಾಲದು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಕವಲಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾರಾಜನರು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ವೇದಿಕೆ ಮೇಲೆ ಮಾಜಿ ಸಚಿವ ಎಚ್.ಎಂ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಗ್ರಾ.ಪಂ.ಅಧ್ಯಕ್ಷ ಸಿದ್ದಪ್ಪ ಮರ್ಯಾಯಿ, ಜಿ.ಪಂ ಮಾಜಿ ಅಧ್ಯಕ್ಷ ಮಲ್ಲಗೌಡ ನೇಲರ್ಿ, ಬಾಗಲಕೋಟ ಜಿಲ್ಲಾ ಮಹಿಳಾ ಅಧ್ಯಕ್ಷ ರಕ್ಷಿತಾ ಈಟಿ, ಡಾ. ರಾಜ್ರೇಂದ್ರ ಸಣ್ಣಕ್ಕಿ, ಎಚ್.ಎಸ್.ನಸಲಾಪೂರೆ, ಬೀರಪ್ಪ ನಾಗರಾಳೆ, ಶಿವು ಮರ್ಯಾಯಿ, ಶಿವಪುತ್ರ ಮನಗೂಳಿ, ಲಕ್ಷ್ಮೀಕಾಂತ ಈಟಿ, ಅನೀಲ ಈಟಿ, ರಾಘವೇಂದ್ರ ಬಡಿಗೇರ ಮುಂತಾದವರು ಇದ್ದರು.