ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
Shifting stray cattle to Goshala
ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
ಗದಗ 25: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉಂಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನೀರೀಕ್ಷಕ ಲಕ್ಷ್ಮಣ, ಹಿರಿಯಆರೋಗ್ಯ ನೀರೀಕ್ಷಕ ಎಂ.ಎಂ ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 