ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಅಭ್ಯರ್ಥಿಗಳ ಚುನಾವಣೆ ವೆಚ್ಚದ ಲೆಕ್ಕಪತ್ರ ಪರೀಶೀಲನೆ
ಹಾವೇರಿ 19: ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಲೆಕ್ಕಪತ್ರ ಪರೀಶೀಲನಾ ಸಭೆ ಭಾರತ ಚುನಾವಣಾ ಆಯೋಗದಿಂದ ನೇಮಕಗೊಂಡ ಚುನಾವಣಾ ವೆಚ್ಚ ವೀಕ್ಷಕರಾದ ಐ ಆರ್ ಎಸ್ ಅಧಿಕಾರಿ ಡಿ.ಎಂ.ನಿಂಜೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆ ದಿನಾಂಕದಿಂದ 30 ದಿನದೊಳಗಾಗಿ ಅಭ್ಯರ್ಥಿಗಳು ಚುನಾವಣಾ ವೆಚ್ಚಸಲ್ಲಿಸಬೇಕಾಗುತ್ತದೆ. ನಿಗದಿತ ಸಮಯದೊಳಗೆ ಎಲ್ಲ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಮಾಹಿತಿ ಸಲ್ಲಿಸಿದ್ದರು. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ ಚುನಾವಣಾ ವೆಚ್ಚ ಪರೀಶೀಲನೆ ಕಾರ್ಯ ಗುರುವಾರ ನಡೆಸಲಾಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯುತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚುನಾಚಣೆ ವೆಚ್ಚ ನಿಗಾ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ವಸಂತಕುಮಾರ, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಏಜೆಂಟರು ಉಪಸ್ಥಿತರಿದ್ದರು.