ಶಿವಾಜಿ ಮಹಾರಾಜರ ಧರ್ಮನಿಷ್ಠೆ, ಮತ್ತು ಧೈರ್ಯ ಇಂದಿಗೂ ಸ್ಫೂರ್ತಿ: ಪ್ರೊ. ವಿಜಯಾ ಕೋರಿಶೆಟ್ಟಿ
Shivaji Maharaj's piety and courage are still an inspiration: Prof. Vijaya Korishetty
ವಿಜಯಪುರ 19: ಛತ್ರಪತಿ ಶಿವಾಜಿ ಮಹಾರಾಜರ ಧರ್ಮನಿಷ್ಠೆ, ನೀತಿ, ಆಡಳಿತ, ತ್ಯಾಗ, ಹಿಂದವಿ ಸ್ವರಾಜ್ಯದ ಪರಿಕಲ್ಪನೆ ಮತ್ತು ಧೈರ್ಯಕ್ಕೆ ತಾಯಿ ಜೀಜಾಬಾಯಿಯವರ ಸಂಸ್ಕಾರಗಳೇ ಕಾರಣ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಶಿವಾಜಿ ಮಹಾರಾಜರ ಆಡಳಿತವು ಪ್ರಜಾಹಿತ ಮತ್ತು ನ್ಯಾಯ ಬದ್ಧತೆಯ ಮೇಲೆ ನಿಂತಿದ್ದು, ಅದರ ಕೇಂದ್ರವಾಗಿ ರಾಯಗಢ ಕೋಟೆ ಮಹತ್ವ ಪಡೆದಿತ್ತು, ಅಷ್ಟೇ ಅಲ್ಲದೇ ವಿದೇಶಿ ದಬ್ಬಾಳಿಕೆಯನ್ನು ಎದುರಿಸಲು ಶಿವಾಜಿ ಮಹಾರಾಜರು ತೋರಿದ ತ್ಯಾಗ ಮತ್ತು ಧೈರ್ಯ ಇಂದಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು. ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಛತ್ರಪತಿ ಶಿವಾಜಿಯವರ ಧೈರ್ಯ, ಸಾಹಸ, ಯುದ್ಧನೀತಿ ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಸ್ಮರಿಸಿ, ವಿದ್ಯಾರ್ಥಿನಿಯರು ಈ ಮೌಲ್ಯಗಳನ್ನು ಅಳವಡಿಸಿಕೊಂಡು ಮುಂದಿನ ಜೀವನದಲ್ಲಿ ನಿಷ್ಠೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ್, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಅಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಪ್ರೊ.ನಾಮದೇವಗೌಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 