ಶಿವಕಂಚಿ ಮಠದ : ಮಹಾದೇವ ತಾತನ ಸಂಭ್ರಮದ ರಥೋತ್ಸವ
Shivakanchi Math: Chariot festival in celebration of Mahadev Tata
ಹೂವಿನಹಡಗಲಿ 30: ತಾಲೂಕಿನ ಹೊಳಗುಂದಿ ಮತ್ತು ಮೊರಗೇರಿ ಮಾರ್ಗ ಮಧ್ಯ ಬರುವ ಶಿವ ಕಂಚಿ ಮಠದ ಶ್ರೀ ಸದ್ಗುರು ಮಹಾದೇವ ತಾತನ ರಥೋತ್ಸವ ಮಂಗಳವಾರ ಸಂಜೆ 5.30ಕ್ಕೆ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಟ್ರಸ್ಟ್ ಕಮಿಟಿ ಅದ್ಯಕ್ಷ ದಳಪತಿ ಕೊಟ್ರಗೌಡ ಪದಾಧಿಕಾರಿಗಳು,ಹೊಳಗುಂದಿ, ಉತ್ತಂಗಿ.ಇಟ್ಟಗಿ, ನಂದಿಹಳ್ಳಿ ಮೊರಗೇರಿ, ಹಗರಿಬೊಮ್ಮನಹಳ್ಳಿ. ವರದಾಪುರ, ಕೊಟ್ಟೂರು ಸೇರಿದಂತೆ ಅಪಾರ ಜನರು ಭಾಗವಹಿಸಿದ್ದರು. ಬೆಳಿಗ್ಗೆ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಭಕ್ತರು ಮಹಾದೇವ ತಾತನಿಗೆ ದೀಡ್ ನಮಸ್ಕಾರ ಹಾಕಿ ಹರಕೆಯನ್ನು ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 