ಕಾಗವಾಡದಲ್ಲಿ ಶಿವಾನಂದ ಕರಿಯರ್ ಅಕಾಡೆಮಿ ಉದ್ಘಾಟನೆ
Shivananda Career Academy inaugurated in Kagawad
ಕಾಗವಾಡದಲ್ಲಿ ಶಿವಾನಂದ ಕರಿಯರ್ ಅಕಾಡೆಮಿ ಉದ್ಘಾಟನೆ
ಕಾಗವಾಡ 10: ಆಧುನಿಕ ಜಗತ್ತು ಅತ್ಯಂತ ತುರುಸಿನಿಂದ ಕೂಡಿದ್ದು, ಪ್ರತಿ ಹಂತದಲ್ಲೂ ಕೂಡಾ ಸ್ಫರ್ಧೆ ಎದುರಿಸಬೇಕಾಗಿದೆ. ಪ್ರತಿಯೊಬ್ಬರು ಕೂಡಾ ಜೀವನದಲ್ಲಿ ಸವಾಲುಗಳನ್ನು ಸ್ವಾಗತಿಸುವ ಮೂಲಕ ಅರ್ಥಪೂರ್ಣವಾದ ಬದುಕನ್ನು ರೂಪಿಸಿಕೊಳ್ಳಬೇಕೆಂದು ಅಥಣಿ ಸಿಪಿಐ ಸಂತೋಷ ಹಳ್ಳೂರು ಹೇಳಿದ್ದಾರೆ. ಅವರು ಮಂಗಳವಾರ ದಿ. 10 ರಂದು ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಉದ್ಯೋಗಕೋಶ ಇವುಗಳ ಸಹಯೋಗದಲ್ಲಿ ಶಿವಾನಂದ ಕರಿಯರ್ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ಮಂಡಳಿಯ ಆಡಳಿತಾಧಿಕಾರಿ ಮೇ. ವ್ಹಿ.ಎಸ್. ತುಗಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಪದವಿ ತರಗತಿಗಳ ಜೊತೆಗೆ ಯುಪಿಎಸ್‌ಸಿ, ಕೆಪಿಎಸ್‌ಸಿ ನೇಮಕಾತಿ ಪರೀಕ್ಷೆಗಳಿಗೆ ಈಗಿನಿಂದಲೇ ತಯಾರಿ ನಡೆಸಲು ಆಡಳಿತ ಮಂಡಳಿ ಸುವರ್ಣಾವಕಾಶ ಕಲ್ಪಿಸಿ ಕೊಟ್ಟಿದೆ. ಎಲ್ಲರೂ ಇದರ ಲಾಭವನ್ನು ಪಡೆದುಕೊಳ್ಳಬೇಕೆಂದರು. ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕುಗಳ ತರಬೇತಿ ಅಧಿಕಾರಿ ಶ್ರೀಶೈಲ ಯಡಹಳ್ಳಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಪೂ ಯತೀಶ್ವರಾನಂದ ಸ್ವಾಮೀಜಿ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ವಹಿಸಿದ್ದರು. ಈ ವೇಳೆ ಪ್ರೊ. ಬಿ.ಎ. ಪಾಟೀಲ, ಪ್ರೊ. ಎ.ಟಿ. ಪಾಟೀಲ, ಡಾ. ಎ.ಎಂ. ಜಕ್ಕಣ್ಣವರ, ಪ್ರೊ. ಬಿ.ಡಿ. ಧಾಮಣ್ಣವರ, ಪ್ರೊ. ವ್ಹಿ.ಬಿ. ಬುರ್ಲೆ, ಪ್ರೊ. ಎಸ್.ಎಸ್. ಫಡತರೆ, ಪ್ರೊ. ಜೆ.ಕೆ. ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಸಮಸ್ತ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 