ಸಂಗೀತ ಸಾಧಕರಿಗೆ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಧಾನ
Shivayogi Puttaraj Award presented to music achievers
ಸಂಗೀತ ಸಾಧಕರಿಗೆ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಧಾನ
ಗದಗ 16: ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗದುಗಿನ ಪಂ. ವೀರೇಶ ಕಿತ್ತೂರ, ಕೊಪ್ಪಳದ ಪಂ. ಸದಾಶಿವ ಪಾಟೀಲ ಹಾಗೂ ಬೆಂಗಳೂರಿನ ಪಂ. ನಾಗಲಿಂಗಯ್ಯ ಗವಾಯಿಗಳು ಅವರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ನೀಲಗುಂದ ಗುದ್ನೇಶ್ವರ ಶ್ರೀಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಹರ್ಲಾಪುರ ಕೊಟ್ಟೂರೇಶ್ವರ ಶ್ರೀಮಠದ ಪೂಜ್ಯಶ್ರೀ ಕೊಟ್ಟೂರೇಶ್ವರ ಶ್ರೀಗಳು, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಲಯ್ಯಜ್ಜನವರು, ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ,ಸಿದ್ದಲಿಂಗಯ್ಯಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಅಧ್ಯಕ್ಷರಾದ ರೇಷ್ಮಾಬಾನು ಹಳೆಮನೆ, ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕರಾದ ಎಸ್. ಎಚ್. ಶಿವನಗೌಡ್ರ, ಮುದುಕಯ್ಯಸ್ವಾಮಿ ಹಿರೇಮಠ, ಸಮಾಜಸೇವಕ ಉಮೇಶ ಹಡಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 