ಜಿಲ್ಲಾಡಳಿತದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ
ಗದಗ 15 : ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಬೆಳಿಗ್ಗೆ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಎಂ ಬಿ ಸಂಕದ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಆಂಜನೇಯ ಕಟಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.