ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ನ್ಯಾಯಾಲಯ ಆವರಣದಲ್ಲಿ ಶ್ರಮದಾನ
Shram Dona in court premises as part of National Cleanliness Day
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ನ್ಯಾಯಾಲಯ ಆವರಣದಲ್ಲಿ ಶ್ರಮದಾನ
ಹಾವೇರಿ 30: ನಮ್ಮ ಮನೆ, ಕೆಲಸದ ಸ್ಥಳ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸುಂದರ ಮತ್ತು ಸ್ವಚ್ಛ ಪರಿಸರ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಹೇಳಿದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ಮಹಾತ್ಮಗಾಂಧೀಜಿಯವರು ಹುತಾತ್ಮರಾದ ದಿನದ ಪ್ರಯುಕ್ತ ಹುತಾತ್ಮರ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮ ಅತ್ಯಂತ ಮಹತ್ವವಾಗಿದ್ದು, ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ಕಾಪಾಡಿಕೊಳ್ಳುವ ಮೂಲಕ ಕಾಯಿಲೆಗಳಿಂದ ಮುಕ್ತರಾಗಿ ಜೀವನ ನಡೆಸೋಣ ಎಂದರು.
ಸ್ವಚ್ಛತಾ ಕಾರ್ಯಕ್ರಮದ ನಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಭಜನೆ ಕಾರ್ಯಕ್ರಮ ಜರುಗಿತು. ಕೊನೆಯಲ್ಲಿ ಮೌನಾಚರಣೆ ಆಚರಿಸಲಾಯಿತು.
ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ನಿಂಗೌಡ ಪಾಟೀಲ, ಪ್ರಕಾಶ ವಿ., ಬಿ.ಆರ್.ಮುತಾಲಿಕದೇಸಾಯಿ, ಶೈಲಜಾ ಎಚ್.ವಿ., ರವಿಪ್ರಕಾಶ ಟಿ.ಆವಿನ, ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಶಿರಸ್ತೇದಾರ ಬೇನಾಳ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ಯಾನಲ್ ವಕೀಲರು ಹಾಗೂ ಅರೇನ್ಯಾಯಿಕ ಸ್ವಯಂ ಸೇವಕರು, ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 