ಮಾ.12 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

Shri Jagadguru Renukacharya Jayanti program on March 12

ಮಾ.12 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

ಬಳ್ಳಾರಿ 06: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಮಾ.12 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. 

ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್‌.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್‌.ಆಂಜನೇಯಲು, ವೀರಶೈವ ವಿದ್ಯಾವರ್ಧಕ ಸಂಘದ ಜಿಲ್ಲಾಧ್ಯಕ್ಷ ಡಾ.ಕಣೇಕಲ್ ಮಹಾಂತೇಶ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಕಮ್ಮರಚೇಡು ಕಲ್ಯಾಣ ಸ್ವಾಮಿ ಸಂಸ್ಥಾನ ಮಠದ ಪೂಜ್ಯ ಶ್ರೀ ಕಲ್ಯಾಣ ಮಹಾಸ್ವಾಮಿಗಳು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಸಂಧ್ಯಾ ಕೋಲಾಚಲಂ ತಂಡದಿಂದ ಭಕ್ತಿ ಸಂಗೀತ ಪ್ರಸ್ತುತ ಪಡಿಸುವರು.*ಮೆರವಣಿಗೆ:*ಜಯಂತಿ ಅಂಗವಾಗಿ ಅಂದು ಸಂಜೆ 04 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ತೇರು ಬೀದಿ-ಹೆಚ್‌.ಆರ್‌.ಗವಿಯಪ್ಪ ವೃತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ. 

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು.