ಕಲ್ಯಾಣ ಚಳುವಳಿಯಲ್ಲಿ ಕರ್ಮಯೋಗಿ ಎಂದೇ ಪ್ರಸಿದ್ಧರಾದ ಏಕೈಕ ಶಿವಯೋಗಿ ಸಿದ್ದರಾಮೇಶ್ವರರು
Siddaramaeshwar is the only Shivayogi who is known as a Karmayogi in the Kalyana movement.
ಮುಂಡಗೋಡ 16: ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಭೋವಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿಯನ್ನು ಬುಧವಾರ ಪಟ್ಟಣದ ಹೆಸ್ಕಾಂ ಕಚೇರಿ ಎದುರಿನಲ್ಲಿರುವ ಸಿದ್ದರಾಮೇಶ್ವರ ಗದ್ದುಗೆ ಆವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ ಶಂಕರ ಗೌಡಿ ಅವರು, 12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದ ಕಲ್ಯಾಣ ಚಳುವಳಿಯಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಶರಣರಲ್ಲಿ ಕರ್ಮಯೋಗಿ ಎಂದು ಕರೆಯಲ್ಪಟ್ಟ ಏಕೈಕ ಶಿವಶರಣರು ಶಿವಯೋಗಿ ಸಿದ್ದರಾಮೇಶ್ವರರು ಎಂದು ಹೇಳಿದರು
ಸಾರ್ವಜನಿಕ ಉಪಯೋಗಕ್ಕಾಗಿ ಕೆರೆ, ಕಟ್ಟೆ, ರಸ್ತೆ, ಕಟ್ಟಡಗಳನ್ನು ನಿರ್ಮಿಸಿ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದ್ದರಿಂದ ಬಸವೇಶ್ವರರು ಅವರಿಗೆ ಈ ಗೌರವ ನೀಡಿದರು ಎಂದರು. ಕಪಿಲ ಸಿದ್ದಮಲ್ಲಿಕಾರ್ಜುನ ಅಂಕಿತನಾಮದಲ್ಲಿ ರಚಿಸಿದ ವಚನಗಳಲ್ಲಿ ಅವರು ಸಮಾನತೆ, ಕಾಯಕ ಮಹತ್ವ ಹಾಗೂ ಮೂಢನಂಬಿಕೆ ವಿರೋಧವನ್ನು ಬೋಧಿಸಿದ್ದಾರೆ ಎಂದು ತಿಳಿಸಿದರು.ಮುಖ್ಯ ಅತಿಥಿಯಾಗಿ ಮಾತನಾಡಿದ ತಾಲೂಕಾ ಪಂಚಾಯತ್ ಇಒ ಟಿ.ವೈ. ದಾಸನಕೊಪ್ಪ ಅವರು, ಸಿದ್ದರಾಮೇಶ್ವರರ ಕಾಯಕ ಮತ್ತು ಸಮಾನತೆಯ ತತ್ವಗಳನ್ನು ಅಳವಡಿಸಿಕೊಂಡರೆ ಸಮಾಜದ ಪ್ರಗತಿ ಸಾಧ್ಯ. ಮುಂಡಗೋಡ ತಾಲೂಕು ಎಲ್ಲಾ ಸಮಾಜದವರು ಒಟ್ಟಾಗಿ ಜಯಂತಿಗಳನ್ನು ಆಚರಿಸುವ ಮೂಲಕ ಸೌಹಾರ್ದತೆಯ ಮಾದರಿಯಾಗಿದೆ ಎಂದರು.ಎಸ್. ಫಕ್ಕಿರ್ಪ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು ಕಾಯಕ ಪ್ರಜ್ಞೆಯನ್ನು ಸಮಾಜದಲ್ಲಿ ಬೇರೂರಿಸಿದ್ದಾರೆ. ಭೋವಿ ಸಮಾಜ ಶ್ರಮಾಧಾರಿತ ಮತ್ತು ಕಠಿಣ ಕೆಲಸ ಮಾಡುವ ಸಮಾಜವಾಗಿದ್ದು ಅವರ ದುಡಿಮೆ ಗೌರವಕ್ಕೆ ಪಾತ್ರವಾಗಿದೆ ಎಂದರು.
ಉಪನ್ಯಾಸಕರಾಗಿ ಶಿಕ್ಷಕ ಹಾಗೂ ಸಾಹಿತಿ ಪಿ. ನಾಗೇಂದ್ರ ಅವರು ಸಿದ್ದರಾಮೇಶ್ವರರ ಜೀವನ, ಸಾಧನೆ ಹಾಗೂ ಸಮಾಜದ ಮೇಲಿನ ಅವರ ಪ್ರಭಾವವನ್ನು ವಿವರಿಸಿದರು.ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರಾರ್ಥನೆ ಹಾಗೂ ನಾಡಗೀತೆ ನಡೆಯಿತು. ಸ್ವಾಗತ, ನಿರೂಪಣೆ ಮತ್ತು ವಂದನಾರೆ್ಣಯನ್ನು ಮಲ್ಲಿಕಾರ್ಜುನ ಬಡಿಗೇರ ನಿರ್ವಹಿಸಿದರು.ಈ ವೇದಿಕೆಯಲ್ಲಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಹನುಮಂತ ಆರೆಗೊಪ್ಪ, ತಾಲೂಕಾಧ್ಯಕ್ಷ ದಯಾನಂದ ಕಳಸಾಪೂರ, ಮಾಜಿ ಅಧ್ಯಕ್ಷೆ ಜಯಸುಧಾ ಭೋವಿ, ಬಿಇಒ ಸುಮಾ ಜಿ., ಪ.ಪಂ ಮುಖ್ಯಾಧಿಕಾರಿ ಸಂತೋಷಕುಮಾರ ಹಾಳಕಲ್ಲಾಪುರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಇಲಾಖೆಗಳ ಸಿಬ್ಬಂದಿ, ಸಮಾಜದ ಹಿರಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 