ಸಿದ್ದರಾಮಯ್ಯನವರ ದಾಖಲೆ ಬಜೆಟ್ ಗದಗ ಜಿಲ್ಲಾಧ್ಯಂತ ವಿಶೇಷ ಪೂಜೆ, ಸಂಭ್ರಮಾಚರಣೆ
Siddaramaiah's Record Budget Gadag District Special Puja, Celebration
ಗದಗ 05 : ಹಲವು ಭಾಗ್ಯಗಳ ಸರದಾರ, ಪಂಚಗ್ಯಾರಂಟಿಗಳ ಹರಿಕಾರ, ದೀನ-ದಲಿತರ ಆಶಾಕಿರಣ, ಹಸಿವು ಮುಕ್ತ ಕರ್ನಾಟಕದ ಕನಸುಗಾರ, ನಾಡದೊರೆ, ದಾಖಲೆಯ ಬಜೆಟ್ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026ಹಿ27ನೇ ಸಾಲಿನ ರಾಜ್ಯ ಬಜೆಟ್‌ನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಈ ಕರ್ನಾಟಕ ಬಜೆಟ್ ಅಧಿವೇಶನಕ್ಕೆ ಸಿದ್ಧರಾಮಯ್ಯರವರ ಅಭಿಮಾನಿ ಬಳಗದವರು ಗದಗ ನಗರದ ಕಳಸಾಪೂರ ರಸ್ತೆಯ ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಿಸುತ್ತಿದ್ದು, ಯಾವತ್ತೂ ಅಭಿಮಾನಿಗಳು, ಹಿತೈಷಿಗಳು ಹಾಗೂ ಸಮಾಜ ಬಾಂಧವರು ದಿ.06.03.2026 ರಂದು ತಮ್ಮ ಗ್ರಾಮಗಳ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡು ಶುಭ ಹಾರೈಸಲು ಗದಗ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಫಕ್ಕೀರ್ಪ ಹೆಬಸೂರರವರು ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ರಾಮಕೃಷ್ಣ ರೊಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 