ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ : ಸುರೇಶ ತಳ್ಳಳ್ಳಿ
Siddaramaiah should be the full-time Chief Minister: Suresh Thanli
ಶಿರಹಟ್ಟಿ 14 : ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 2028 ರವರೆಗೆ ಮುಖ್ಯಮಂತ್ರಿಯನ್ನಾಗಿ ಹೈಕಮಾಂಡ್‌ನವರು ಮುಂದುವರೆಸಬೇಕು ಎಂದು ಹುಬ್ಬಳ್ಳಿಯಲ್ಲಿ ಜನೇವರಿ 21 ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತ (ಅಹಿಂದ) ಸಮುದಾಯಗಳಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಿರಹಟ್ಟಿ ತಾಲೂಕು ಅಹಿಂದ ಒಕ್ಕೂಟದ ಅಧ್ಯಕ್ಷ ಸುರೇಶ ನೀಲಪ್ಪ ತಳ್ಳಳ್ಳಿ ಹೇಳಿದರು.
ಅವರು ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಹಿಂದ ಒಕ್ಕೂಟದ ವತಿಯಿಂದ ಏರಿ್ಡಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಸಮರ್ಕವಾಗಿ ತಲುಪಿಸುತ್ತಾ ಬಂದಿದ್ದಾರೆ. ಇವರ ಮೇಲೆ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದಿದ್ದರೂ ಇವರನ್ನು ಕೆಳಗಿಳಿಸುವ ಹುನ್ನಾರ ಖಂಡನೀಯ ಎಂದು ಹೇಳಿದರು.
ಈ ವೇಳೆ ಗದಗ ಜಿಲ್ಲಾ ಅಹಿಂದ ಒಕ್ಕೂಟದ ಅಧ್ಯಕ್ಷ ಸುರೇಶ ಬೀರಣ್ಣವರ, ಮುಂಡರಗಿ ತಾಲೂಕು ಅಧ್ಯಕ್ಷ ಹನುಮಂತ ಚೌಡಾಳ ಹಾಗೂ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಹಾಲಪ್ಪ ಹಳ್ಳಿಕೇರಿ ಮಾತನಾಡುತ್ತಾ, ಕಳೆದ 2023 ರ ಚುನಾವಣೆಯಲ್ಲಿ 136 ಸೀಟ್‌ಗಳು ಗೆಲ್ಲಲ್ಲು ಮೂಲ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಅವರನ್ನು ಕೆಳಗಿಳಿಸಲು ಹೈಕಮಾಂಡ್ ಮುಂದಾಗಿದ್ದೆ ಆದರೆ ಜೇನುಗೂಡಿಗೆ ಕೈ ಹಾಕಿದ್ದೇ ಆದರೆ ಮುಂದಿನ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಅಹಿಂದ ಒಕ್ಕೂಟ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೆಳಗಿಸಲು ತಯಾರಿ ನಡೆಸಿದ್ದರೆ ಎಂಬ ವದಂತಿ ಹರುಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಹಲವು ಕಡೆ ಎಂದು ಜನೇವರಿ 21 ರಂದು ಹುಬ್ಬಳ್ಳಿಯಲ್ಲಿ, ಡಾವಣಗೇರಿ, ಮೈಸೂರು ಹಾಗೂ ಚಿತ್ರದುರ್ಗ ಅಥವಾ ಬಳ್ಳಾರಿಯಲ್ಲಿ ಅಹಿಂದ ವರ್ಗದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಹುಬ್ಬಳ್ಳಿಯಲ್ಲಿ ನಡೆಯುವ ಅಹಿಂದ ಸಮಾವೇಶಕ್ಕೆ ಗದಗ ಜಿಲ್ಲೆಯ 7 ತಾಲೂಕುಗಳಿಂದ ಸುಮಾರು 1500 ಜನರು ಸೇರಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಸವರಾಜ ಇಮ್ಮಡಿ, ಶಾಬುದ್ದೀನ್ ಪರಿಟ್, ಹುಸೇನಸಾಬ ಮಸೂತಿ, ವಿಷ್ಟು ಇಮ್ಮಡಿ ಹಾಗೂ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 