ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಮುಂದಿನ ಕೆಲಸ ಸಾಗದು ಎಂಬಂತೆ ನಡೆದುಕೊಂಡ ಸರ್.ಎಂ.ವಿಶ್ವೇಶ್ವರಯ್ಯ
Sir M. Visvesvaraya acted as if he could not do anything and sat with his hands folded, as if his f
ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಮುಂದಿನ ಕೆಲಸ ಸಾಗದು ಎಂಬಂತೆ ನಡೆದುಕೊಂಡ ಸರ್.ಎಂ.ವಿಶ್ವೇಶ್ವರಯ್ಯ
ಗದಗ 16: ಶಿಸ್ತುಬದ್ಧ ಜೀವನ ಹಾಗೂ ಸಮಯ ಪ್ರಜ್ಞೆಯ ಸಾಕಾರ ಮೂರ್ತಿಯಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯನವರ ಬದುಕು ನಮಗೆಲ್ಲಾ ಮಾರ್ಗದರ್ಶಿಯಾಗಿದೆ ಎಂದು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾ ಸಿವ್ಹಿಲ್ ಗುತ್ತಿಗೆದಾರರ ಅಸೋಸಿಯೇಶನ್, ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಯೋಗದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಮಾಜದ ಬಗ್ಗೆ ತುಂಬಾ ಕಳಕಳಿ ಇದ್ದದ್ದರಿಂದ ಅವರು ಕಂಡ ಪ್ರತಿಯೊಂದು ಕನಸುಗಳು ನಾಡಿನ ಕನಸಾಗಿದ್ದವು. ಆ ಕನಸುಗಳನ್ನು ನನಸು ಮಾಡುವುದಕ್ಕೆ ಅವಿರತವಾಗಿ ಪ್ರಯತ್ನಿಸಿದರು. ಅವರ ಸಾಧನೆಯ ವ್ಯಾಪ್ತಿಯನ್ನು ನೋಡಿದರೆ ಅವರನ್ನು ಕೇವಲ ಇಂಜಿನಿಯರ್ ಎಂದು ಕರೆಯುವುದು ತಪ್ಪಾಗುತ್ತದೆ, ಅವರೊಬ್ಬ ಮತ್ಸದ್ಧಿಯಾಗಿದ್ದರು. ಅದರ ಪರಿಣಾಮವೇ ಶಿಕ್ಷಣ, ಉದ್ಯಮ, ಉದ್ಯೋಗ, ಕೃಷಿ, ನೀರಾವರಿ, ಕಲೆ, ಸಾಹಿತ್ಯ, ನಾಡು-ನುಡಿ, ಇತ್ಯಾದಿಗಳ ಬಗ್ಗೆ ಕಳಕಳಿ ಹೊಂದಿದ್ದರು ಎಂದರು.ಆಧುನಿಕ ಕಾಲದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ಹೊಸ ಹೊಸ ಬದಲಾವಣೆ ಇಂದಿನ ಇಂಜಿನಿಯರ್ ಹಾಗೂ ಗುತ್ತಿಗೆದಾರರು ಅಳವಡಿಸಿಕೊಂಡು ಹೋಗಬೇಕು. ಈ ಭಾಗದ ಸಂಸದರು, ಶಾಸಕರು ಸೇರಿಕೊಂಡು ಗುತ್ತಿಗೆದಾರರಿಗೆ ಆಗುತ್ತಿರುವ ಸಮಸ್ಯೆ ಪರಿಹಾರ ನೀಡುವ ಬಗ್ಗೆ ಚಿಂತನೆ ಮಾಡಲಾಗುತ್ತದೆ ಎಂದರು.ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ಕನ್ನಂಬಾಡಿ ಕಟ್ಟೆ ಮತ್ತು ಅದಕ್ಕೆ ಅಳವಡಿಸಿರುವ ಸ್ವಯಂ ಚಲಿತ ಗೇಟುಗಳು, ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಹಾಗೂ ಪೇಪರ್ ಕಾರ್ಖಾನೆಗಳು, ಶರಾವತಿ ಜಲ ವಿದ್ಯುತ್ ಯೋಜನೆ ಇವೆಲ್ಲ ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಹಳೆಯ ಮೈಸೂರು ಭಾಗವು ಹಚ್ಚ ಹಸಿರಿನಿಂದ ಕೂಡಿದೆ ಎಂದರೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಪ್ರಮುಖವಾಗಿದೆ ಎಂದರು.
ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿದರು. ಜಿಲ್ಲಾ ಸಿವ್ಹಿಲ್ ಗುತ್ತಿಗೆದಾರರ ಅಸೋಸಿಯೇಶನ್ ಅಧ್ಯಕ್ಷ ಎಸ್.ಕೆ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಿವ್ಜಿಲ್ ಗುತ್ತಿಗೆದಾರರ ಅಸೋಸಿಯೇಶನ್ ಉಪಾಧ್ಯಕ್ಷ ಆಂಜನೀಯ ಕಟಗಿ ಮಾತನಾಡಿದರು. ಯುವ ಮುಖಂಡ ಮಿಥುನ ಪಾಟೀಲ, ಉಮೇಶ್ ನಾಯಕ, ರಾಘವೇಂದ್ರ ಪುರೋಹಿತ, ಚಂದ್ರಶೇಖರ ನಗಲಕೇರ್, ಗುರುನಾಥ, ಆರ್.ಕೆ.ಮಠದ, ಅಶೋಕ ಕಣವಿ, ಎಸ್.ಕೆ. ಪಾಟೀಲ, ವಿಜಯ ಮುಲ್ಕಿಪಾಟೀಲ, ಆರ್.ಡಿ.ರಂಗಪ್ಪನವರ, ಎಸ್.ಕೆ. ಪಾಟೀಲ, ವಿ.ಜಿ. ಮುಲ್ಕಪಾಟೀಲ, ಆರ್.ಡಿ. ರಂಗಪ್ಪನವರ, ಬಿ.ಐ. ಶಿರಗುಂಪಿ, ಸುರೇಶ ತಿರ್ಲಾಪೂರ, ಬಿ.ಎಸ್. ಮೇಟಿ, ಎ.ಎಚ್. ಪಾಟೀಲ, ಬಿ.ಆರ್. ಹೊಸಮನಿ, ಬಸವರಡ್ಡಿ ಹಂಚಿನಾಳ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 