ಸಿರಿಗೇರಿ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಪರೀಶೀಲನೆ
Sirigeri: Pradhan Mantri Safe Motherhood Abhiyan Program review
ಸಿರಿಗೇರಿ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಪರೀಶೀಲನೆ
ಬಳ್ಳಾರಿ 10: ಜಿಲ್ಲೆಯಾದ್ಯಂತ ಪ್ರತಿ ತಿಂಗಳು 09 ಮತ್ತು 24ನೇ ತಾರೀಖಿನಂದು ಗಂಡಾಂತರ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವ ಕಾರ್ಯ ಜರುಗುತ್ತಿದ್ದು, ಇದು ನಿರಂತರವಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಮಂಗಳವಾರ, ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಕುರಿತು ಪರೀಶೀಲನೆ ನಡೆಸಿ ಅವರು ಮಾತನಾಡಿದರು.
ಗಂಡಾಂತರ ಗರ್ಭಿಣಿ ಮಹಿಳೆಯರು ಎಂದು ಗುರುತಿಸಿಕೊಳ್ಳುವ ಚೊಚ್ಚಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ-ಜವಳಿ ಗರ್ಭಿಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗುವುದು, ಮೊದಲ ಹೆರಿಗೆ ಸಿಸೇರಿಯನ್ ಮುಂತಾದ ಕಾರಣಗಳಿದ್ದರೆ ಅವರನ್ನು ನಿರ್ಲ್ಯಕ್ಷಿಸದೇ ನಿರಂತರ ನಿಗಾವಹಿಸಬೇಕು. ಗರ್ಭಿಣಿ ಮಹಿಳೆಯರ ತಾಯಿ ಕಾರ್ಡ್ ಪರೀಶೀಲಿಸಿ ಗೆಸ್ಟೋಸಿಸ್ ಸ್ಕೋರ್ ಬಗ್ಗೆ ಪರೀಶೀಲಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾಮಾನ್ಯವಾಗಿ 12 ವಾರದೊಳಗೆ ಗರ್ಭಿಣಿ ಎಂದು ತಿಳಿದ ನಂತರ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಕೈಗೊಳ್ಳಲು ಸೂಚಿಸಬೇಕು. ಆರೋಗ್ಯ ಇಲಾಖೆಯಿಂದ ನೀಡುವ ತಾಯಿ ಕಾರ್ಡ್‌ನಲ್ಲಿ ಮಹಿಳೆಯ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು. ವೈದ್ಯರ ಸೂಚನೆಯಂತೆ ಪ್ರತಿ ತಿಂಗಳು ತೂಕ, ರಕ್ತದ ಪ್ರಮಾಣ ಹಾಗೂ ಇತರೆ ಅಗತ್ಯ ಪರೀಕ್ಷೆಗಳನ್ನು ಮಾಡಿಸಬೇಕು. ಇದರಿಂದ ಹೆರಿಗೆ ಸಮಯದಲ್ಲಿ ಅನುಕೂಲವಾಗುತ್ತದೆ ಎಂದು ಆಶಾಕಾರ್ಯಕರ್ತೆಯರಿಗೆ ಸೂಚಿಸಿದರು.
ತೀವ್ರ ರಕ್ತಹೀನತೆಯ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ ವಿಧಾನ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಸ್ಕ್ಯಾನ್ ಮಾಡಿಸಲು ತಿಳಿಸಬೇಕು. ಮೊದಲ ಹೆರಿಗೆ ಶಸ್ತ್ರಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡುವುದು, ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ-ಟಿ, ನೀರೊಧ ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ಗರ್ಭಿಣಿ ಮಹಿಳೆಯರು ಗುಣಮಟ್ಟದ ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ವೈದ್ಯರ ಸಲಹೆಯಂತೆ ಉಚಿತವಾಗಿ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಕನಿಷ್ಟ 180 ಮತ್ತು ಒಂದು ವೇಳೆ ರಕ್ತಹೀನತೆಯ ಪ್ರಮಾಣ ತೀವ್ರವಾಗಿದ್ದಲ್ಲಿ ದಿನಕ್ಕೆ 2 ರಂತೆ 360 ಮಾತ್ರೆಗಳನ್ನು 6 ತಿಂಗಳ ಅವಧಿಯಲ್ಲಿ ಸೇವಿಸಬೇಕು. ಜೊತೆಗೆ ದೈಹಿಕವಾಗಿ ಸದೃಢರಾಗಿರಲು ಕ್ಯಾಲ್ಸಿಯಂ ಮಾತ್ರೆಗಳನ್ನು ಸಹ ನುಂಗಬೇಕು ಎಂದು ವಿನಂತಿಸಿದರು.
ಬಳಿಕ ಡಿಹೆಚ್‌ಒ ಡಾ.ಯಲ್ಲಾ ರಮೇಶ್ ಬಾಬು ಅವರು ಗರ್ಭಿಣಿ ಮಹಿಳೆಯರ ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ವೈದ್ಯಾಧಿಕಾರಿಗಳಾದ ಡಾ.ತಿಪ್ಪಾರೆಡ್ಡಿ, ಡಿವಿಬಿಡಿಸಿಪಿ ಜಿಲ್ಲಾ ಸಲಹೆಗಾರ ಪ್ರತಾಪ್, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಚಿದಾನಂದ, ಪಿಹೆಚ್‌ಸಿಒ ಗಂಗಮ್ಮ, ನರ್ಸಿಂಗ್ ಅಧಿಕಾರಿ ಈರಮ್ಮ ಸೇರಿದಂತೆ ಆಶಾ ಕಾರ್ಯಕರ್ತೆಯರು, ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಬಳ್ಳಾರಿ 10: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ, ಎಸ್.ಟಿ-ರೂ.2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ -ರೂ.1 ಲಕ್ಷ ಒಳಗಿರಬೇಕು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆನ್ ಲೈನ್ ವೆಬ್‌ಸೈಟ್‌ಣಣಠಿ:/ಠಿ.ಞಚಿಡಿಟಿಚಿಣಚಿಞಚಿ.ರಠ.ಟಿ ಗೆ ಭೇಟಿ ನೀಡಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್‌ಣಣಠಿ://ಛಛಿತಿಜ.ಞಚಿಡಿಟಿಚಿಣಚಿಞಚಿ.ರಠ.ಟಿ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 