ಲೋಕದರ್ಶನ ವರದಿ
ಸಿರುಗುಪ್ಪ 17: ತಾಲ್ಲೂಕು ತೆಕ್ಕಲಕೋಟೆ ಪಟ್ಟಣದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಶಾಸಕ ಎಂ.ಎಸ್ ಸೋಮಲಿಂಗಪ್ಪ ಭೇಟಿ ನೀಡಿ ಮೂಲಭೂತ ಸೌಕರ್ಯ ಕಾಮಗಾರಿಗಳ ಬಗ್ಗೆ ಪರಿವೀಕ್ಷಣೆ ಮಾಡಿದರು ಗುಣಮಟ್ಟದ ಕಾಮಗಾರಿ ಕಾಪಾಡಿಕೊಂಡು ವಿದ್ಯಾರ್ಥಿ ವಸತಿ ನಿಲಯ ಪ್ರಾರಂಭವಾಗುವ ಮೊದಲೇ ಕಾಮಗಾರಿಗಳು ಮುಗಿಸಲು ಸ್ಥಳದಲ್ಲಿ ಉಪಸ್ಥಿತರಿದ್ದ ತಾಲ್ಲೂಕು ಸಮಾಜ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಾಶೂ ಮೋದಿನ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-2016ನೇ ಸಾಲಿನ ಸಿರುಗುಪ್ಪ ತಾಲ್ಲೂಕಿನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಯರ ನಿಲಯ ತೆಕ್ಕಲಕೋಟೆ ಮತ್ತು ರಾವಿ ಹಾಲು ಹಾಗೂ ಆಶ್ರಯ ವಸತಿ ಶಾಲೆ ತೆಕ್ಕಲಕೋಟೆ ನಿಲಯಗಳಲ್ಲಿ ಖಾಲಿ ಇರುವ ವಸತಿ ನಿಲಯ ಸ್ಥಾನಗಳಿಗೆ ಆನ್ ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಜೂನ್ 10 ರೊಳಗೆ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08396-222003ಗೆಸಂಪರ್ಕಿಬಹುದು