ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಧರಣಿ ಸತ್ಯಾಗ್ರಹ

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಧರಣಿ ಸತ್ಯಾಗ್ರಹ  Sit-in protest demanding the fulfillment of various demands of Gram Panchayat employees


ಲಕ್ಷ್ಮೇಶ್ವರ 17 :  ರಾಜ್ಯದ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ , ಗದಗ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗದಗ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯುತ್ತಿದೆ.  

ಗ್ರಾಮ ಪಂಚಾಯಿತಿ ನೌಕರರ ಪ್ರಮುಖ ಬೇಡಿಕೆಗಳಾದ 2026ರ ಮೇ 22ರಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕನಿಷ್ಠ ವೇತನವನ್ನು ತಕ್ಷಣದಿಂದಲೇ ಜಾರಿಗೊಳಿಸುವುದು, ಗ್ರಾಮ ಪಂಚಾಯಿತಿ ನೌಕರರಿಗೆ ಇಡಿ ಗಂಟು ನೀಡುವುದು, ಬಾಕಿ ಇರುವ ಅನುಮೋದನೆಗಳನ್ನು ನೀಡುವುದು ಹಾಗೂ ಸ್ವಚ್ಛ ವಾಹಿನಿ ನೌಕರರಿಗೆ ಬಾಕಿ ವೇತನವನ್ನು ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.  

ಈ ಹಿನ್ನೆಲೆಯಲ್ಲಿ ಸೋಮವಾರ ಲಕ್ಷ್ಮೇಶ್ವರ ತಾಲೂಕು ಗ್ರಾಮ ಪಂಚಾಯಿತಿ ನೌಕರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಅವರಿಗೆ ಮನವಿ ಸಲ್ಲಿಸಿದರು.  

ಮನವಿ ಸಲ್ಲಿಸುವ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಅರ್ಕಸಾಳಿ, ಮಾಂತೇಶ ಸುಣಗಾರ, ಸಿದ್ದು ಹರದಗಟ್ಟಿ, ಮಹೇಶ ಮೂಲಿಮನಿ, ಹನುಮಂತ ಗೌಡ, ಮಲಿಂಗನಗೌಡ, ಫಕೀರೇಶ ಮಾಕಡಿ, ಲಿಂಗರಾಜ ಬಾಗವಾಡ, ಶ್ರೀಶೈಲಪ್ಪ ಬಡಿಗೇರ, ರಮೇಶ ಅಣ್ಣಿಗೇರಿ, ಗುಡದಪ್ಪ ಕಾಮತ ಸೇರಿದಂತೆ ಹಲವರು ಉಪಸ್ಥಿತರಿದ್ದರು.