ವಿಜ್ಞಾನ ಸಂಶೋಧನೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಕಾವ್ಯ ಚತುರ್ವೇದಿ
ಕೊಪ್ಪಳ 14: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕೊಪ್ಪಳ ಹಾಗೂ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ದಿನಾಂಕ 14-12-2024 ರಂದು ಕೊಪ್ಪಳದ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಕಾವ್ಯ ಚತುರ್ವೇದಿ, ಭಾ.ಅ.ಸೇ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ ಇಲಾಖೆ, ಕೊಪ್ಪಳ ಇವರು ಆಗಮಿಸಿ ಮಕ್ಕಳು ಕಲಿಕೆಯ ಜೊತೆಗೆ ವಿಜ್ಞಾನದಲ್ಲಿ ಸಂಶೋಧನಾ ಆಸಕ್ತಿ ಬೆಳೆಸಿಕೊಳ್ಳಲು ತಿಳಿಸಿದರು.
ಸದರಿ ಕಾರ್ಯಕ್ರಮದಲ್ಲಿ ರಾಮರಾವ್ ಆರ್. ಬಿರಾದಾರ, ಲೆಕ್ಕ ಹಾಗೂ ಕಾರ್ಯಕ್ರಮ ಅಧಿಕಾರಿ, ನೆಹರು ಯುವ ಕೇಂದ್ರ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಚನ್ನಬಸವ, ಪ್ರಾಚಾರ್ಯರು ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರು ವಹಿಸಿ ಮಾತನಾಡಿದ ಅವರು ಮಹಿಳೆಯರು ಹಿಂಜರಿಯದೇ ವೈಜ್ಞಾನಿಕ ಶಿಕ್ಷಣ ಪಡೆಯಬೇಕು ಎಂದರು.
ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು ಮತ್ತು ಜಿಲ್ಲಾ ಮಟ್ಟದಲ್ಲಿ ಆಯ್ಕೆಗೊಂಡವರನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದ ಆಯೋಜಕರಾದ ಡಾ. ಮಂಜುನಾಥ ಎಂ., ಮುಖ್ಯಸ್ಥರು, ಭೌತಶಾಸ್ತ್ರ ವಿಭಾಗ ವಂದಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶರಣಪ್ಪ, ಜಾಲಿಹಾಳ ಶರಣಪ್ಪ, ಪ್ರಶಾಂತ ಕೊಂಕಲ, ಸುಂದರ ಮೇಟಿ, ಶಶಿಕಾಂತ ಉಮ್ಮಾಪುರೆ, ವೆಂಕಟೇಶ ನಾಯ್ಕ, ಪ್ರವೀಣ ಹಾದಿಮನಿ ಮತ್ತಿತರರು ಉಪಸ್ಥಿತರಿದ್ದರು.