ಸೋಗಿ : ವಿಜೃಂಭಣೆಯಿಂದ ನಡೆದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ
Sogi: Veerabhadreshwara Swamy chariot festival held with great pomp
ಹೂವಿನಹಡಗಲಿ 31 : ವೀರಣ್ಣ ದೊರೆಯೇ ನಿನಗಾರು ಸರಿಯೇ.. ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್ ಎನ್ನುವ ಬಹುಪರಾಕ್ ಜಯಘೋಷದ ಮಧ್ಯೆ ಆರಾಧ್ಯ ದೈವ ಸೋಗಿ ಗ್ರಾಮದ ವೀರಭದ್ರೇಶ್ವರ ಸ್ಜಾಮಿ ರಥೋತ್ಸವ ಮಂಗಳವಾರ ಸಂಜೆ 5.30ಕ್ಕೆ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ನಡೆಯಿತು. ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ಮೊರಗೇರಿ ವೀರಮ್ಮ ಗೆ ?1.81,101 ರೂ. ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು. ದೇಗುಲ ಅದ್ಯಕ್ಷ ರು ,ಪದಾಧಿಕಾರಿಗಳು, ರಥೋತ್ಸವ ದಲ್ಲಿ ಹೂವಿನಹಡಗಲಿ, ನಂದಿಹಳ್ಳಿ,ಹೊಳಗುಂದಿ, ಮುದೇನೂರು, ಹುಗಲೂರು ಸೇರಿದಂತೆ ಅಪಾರ ಜನರು ಭಾಗವಹಿಸಿದ್ದರು.ಸ್ಥಳೀಯ ಕಲಾವಿದರಿಂದ ಸಾಮಾಜಿಕ ನಾಟಕ ಪ್ರದರ್ಶಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 