ಜಾಗೃತ ಸಮಿತಿಗೆ ಸೋಮು ಎಚ್. ಹಿಪ್ಪರಗಿ ನೇಮಕ
Somu H. Hipparagi appointed to Vigilance Committee
ವಿಜಯಪುರ 29: ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿಗೆ ವಿಜಯಪುರದ ಸೋಮು ಎಚ್. ಹಿಪ್ಪರಗಿ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸೋಮು ಹಿಪ್ಪರಗಿ ಅವರು ಅರಣ್ಯ ಅಧಿಕಾರಿಯಾಗಿದ್ದು, ಪ್ರಸ್ತುತ ಕರ್ನಾಟಕ ಸರಕಾರದಿಂದ ಉನ್ನತ ವ್ಯಾಸಂಗ ರಜೆಯ ಮೇಲೆ, ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ- ಕಾಸರಗೋಡು ಕನ್ನಡ ವಿಧಾಗದ ಡಾ. ಗೋವಿಂದರಾಜು ಎಮ್.ಕಲ್ಲೂರು ಅವರ ಮಾರ್ಗದರ್ಶನದಲ್ಲಿ ’ರಾಮಾಯಣ ಮಹಾಕಾವ್ಯದಲ್ಲಿ ವನ್ಯ ಸಂಸ್ಕೃತಿ’ ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡಿದ್ದಾರೆ. ಇಂಗ್ಲಿಷ್ ಹಾಗೂ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದದ್ದು, ಮೋಡದ ಮರೆಯಲಿ ನನ್ನೆದೆಯ ಬಾನುಲಿ ಇವರ ಮೊದಲ ಕವನ ಸಂಕಲನ. ಪರಿಸರ, ಬುಡಕಟ್ಟು ಸಂಸ್ಕೃತಿ, ಜಾನಪದ ಮತ್ತು ಹಳೆಗನ್ನಡ ಸಾಹಿತ್ಯ ಇವರ ಆಸಕ್ತಿ ವಿಷಯಗಳಾಗಿದ್ದು, ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 