ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ
South Indian Chief Ministers' Conference to be held in Bengaluru soon
ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮಾಜವಾದಿ ಅಧ್ಯಯನ ಕೇಂದ್ರ, ಸಮಾಜವಾದಿಗಳ ಸಮಾಗಮ ನಗರದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತ ಸಮಾಜವಾದಿಗಳ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ವ್ಯವಸ್ಥೆ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಕೇಂದ್ರದಿಂದ ಬರಬೇಕಾದ ಅನುದಾನ ಕಡಿಮೆಯಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚು ಅನ್ಯಾವವಾಗುತ್ತಿದ್ದು, ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಾಗಿದೆ ಎಂದು ಹೇಳಿದರು.
ಕರ್ನಾಟಕವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದು. ಆದರೆ ನಮಗೆ ಕೇಂದ್ರದಿಂದ ಬರುತ್ತಿರುವ ಅನುದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಈಗ ಮನರೇಗ ಯೋಜನೆ ಮೂಲಕ ನೀಡುತ್ತಿದ್ದ ಅನುದಾನದ ಪ್ರಮಾಣ ತಗ್ಗಿಸಿದ್ದು, ರಾಜ್ಯಗಳ ಆರ್ಥಿಕ ವ್ಯವಸ್ಥೆಗದ ಹೊಡೆತ ಬೀಳಲಿದೆ ಎಂದರು.
ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ವ್ಯಾಪ್ತಿಯ ಕ್ಷೇತ್ರಗಳ ಪ್ರಮಾಣ ಕಡಿಮೆ ಮಾಡಿ ಹಿಂದಿ ಭಾಷೆ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಹುನ್ನಾರ ನಡೆದಿದೆ. ಇದನ್ನು ಬಲವಾಗಿ ವಿರೋಧಿಸಿ ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ ಎಂದರು.
ಸಮಾಜವಾದಿಗಳ ಬೇಡಿಕೆಯಂತೆ ಕರ್ನಾಟಕದಲ್ಲಿ ಲೋಹಿಯಾ ಭವನ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ, ಶಾಸಕ ಬಿ.ಆರ್. ಪಾಟೀಲ ಮಾತನಾಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 