ಗಣಿತಶಾಸ್ತ್ರ ವಿಭಾಗದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ
Special Lecture Program by Department of Mathematics
ಗಂಗಾವತಿ 25: ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಡಿ ಗಣಿತಶಾಸ್ತ್ರ ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಬಿ.ಪರ್ವತಲು ವಿಶೇಷ ಉಪನ್ಯಾಸ ನೀಡಿ, ಗಣಿತಶಾಸ್ತ್ರದ ಸ್ಪರ್ಧಾತ್ಮಕ ಸವಾಲುಗಳು ಹಾಗೂ ಇರುವ ಉದ್ಯೋಗಾವಕಾಶಗಳನ್ನು ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ವಹಿಸಿದ್ದರು.
ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕ ಮಂಜುನಾಥ ಕೆ.ಎಚ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಅಣ್ಣೋಜಿರಡ್ಡಿ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ.ಕೆ, ಪ್ರಾಸ್ತಾವಿಕ ಮಾತನಾಡಿದರು. ಅತಿಥಿ ಉಪನ್ಯಾಸಕರಾದ ನಿರೋಷ ಎನ್ ಸ್ವಾಗತಿಸಿದರು. ಶರಣಬಸವ ಅತಿಥಿ ಪರಿಚಯ ಮಾಡಿದರು. ನೇತ್ರಾ ಸಜ್ಜನ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದರು.ಉಪನ್ಯಾಸದ ನಂತರ ಡಾ.ಬಿ.ಪರ್ವತಲು ಅವರನ್ನು ಸತ್ಕರಿಸಿ, ಗೌರವಿಸಲಾಯಿತು. ಬಿಯಸ್ಕೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 