ಶಿಕ್ಷಕರ ಹಾರೈಕೆಯಿಂದ ವಿಶೇಷ ಸಾಧನೆ : ಸಭಾಪತಿ ಬಸವರಾಜ ಹೊರಟ್ಟಿ
Special achievement due to teachers' wishes: Speaker Basavaraja Horatti
ಕಾರವಾರ.ಡಿ.25 : ಶಿಕ್ಷಕರ ಹಾರೈಕೆ, ಆಶೀರ್ವಾದದಿಂದ ಯಾರೂ ಮಾಡಲಾಗದ ಸಾಧನೆ ಮಾಡಲು ನನಗೆ ಸಾಧ್ಯವಾಗಿದೆ, ನಾಲ್ಕು ಬಾರಿ ಸಚಿವ, ಮೂರು ಬಾರಿ ಸಭಾಪತಿ ಆದೆ. ಇದೆಕ್ಕೆಲ್ಲಾ ಶಿಕ್ಷಕರ ಹಾರೈಕೆಯೇ ಕಾರಣ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಕಾರವಾರದ ಶಿವಾಜಿ ಹೈಸ್ಕೂಲ್ ನಲ್ಲಿ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಪ್ರೌಢಶಾಲಾ ಮುಖ್ಯಾಧ್ಯಪಕರ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣಾ ಸಭೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಶಿಕ್ಷಕರ ಪ್ರತಿನಿಧಿ ಆಗಿರುವುದರಿಂದ ನಾನು ಏನೆ ತಪ್ಪು ಮಾಡಿದರೂ ಶಿಕ್ಷಕರಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ ಶಿಕ್ಷಕರ ಪ್ರೀತಿ ವಿಶ್ವಾಸವನ್ನು ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಅಪರ ಶಿಕ್ಷಣ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಈಶ್ವರ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಡಿಡಿಪಿಐ ಲತಾ ನಾಯಕ್, ಬಿಇಓ ಉಮೇಶ ನಾಯ್ಕ, ಉಡುಪಿಯ ಟೀಚರ್ ಕೋ-ಆಪರೇಟವ್ ಸೊಸೈಟಿ ಅಧ್ಯಕ್ಷ ದಿನಕರ ಶೆಟ್ಟಿ, ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಾಧ್ಯಾಪಕರನ್ನು ಸನ್ಮಾನಿಸಲಾಯಿತು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 