ಉರಗ ರಕ್ಷಣೆಯಲ್ಲಿ ವಿಶೇಷ ಸಾಧನೆ! ಮುತ್ತುರಾಜರಿಗೆ ಸನ್ಮಾನ
Special achievement in reptile conservation! Honored to Muthuraja
ಮುಂಡಗೋಡ 17: ಯಲ್ಲಾಪುರದಲ್ಲಿ ಉಪವಲಯ ಅರಣ್ಯಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಲಾದ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ, ಉರಗ ರಕ್ಷಣಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮುಂಡಗೋಡ ತಾಲೂಕಿನ ಕಾತೂರ ವಲಯದ ಹಳ್ಳಿ ಗಸ್ತು ಅರಣ್ಯ ಪಾಲಕ ಮುತ್ತುರಾಜ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹಾಗೂ ಯಲ್ಲಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಭಾನು ಜಿ.ಪಿ. (ಭಾ.ಅ.ಸೇ) ಅವರು ಗೌರವ ಪ್ರದಾನ ಮಾಡಿದರು. ಜನವಸತಿಗಳಲ್ಲಿ ಸಿಲುಕುವ ವಿಷಕಾರಿ ಹಾಗೂ ಅವಿಷಕಾರಿ ಉರಗಗಳನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಗಳಿಗೆ ಬಿಡುಗಡೆ ಮಾಡುವ ಮೂಲಕ ಮುತ್ತುರಾಜ ಅವರು ಅರಣ್ಯ ಸಂರಕ್ಷಣೆ ಮತ್ತು ಮಾನವ, ವನ್ಯಜೀವ ಸಂಘರ್ಷ ತಡೆಗಟ್ಟುವಲ್ಲಿ ಮಾದರಿಯ ಸೇವೆ ಸಲ್ಲಿಸಿದ್ದಾರೆ ಎಂದು ಗಣ್ಯರು ಪ್ರಶಂಸಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 