ಆಗಸ್ಟ್ 1 ರ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ವಿಶೇಷ ಲೇಖನ : ವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಡಾಽಽ ಮಹಾಂತ ಶಿವಯೋಗಿಗಳು
Special article on the occasion of August 1st Addiction-Free Day: Dr. Mahant Shivayogi begs for alm
ಆಗಸ್ಟ್ 1 ರ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ವಿಶೇಷ ಲೇಖನ : ವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಡಾಽಽ ಮಹಾಂತ ಶಿವಯೋಗಿಗಳು
ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ, ಧವಸ ಧಾನ್ಯಗಳ ಭಿಕ್ಷೆ ಬೇಡಿ ಸಂಗ್ರಹಿಸಿದ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ ನೀಡುವ ಕಾರ್ಯವನ್ನು ಎಲ್ಲಡೆ ನಡೆದಿದೆ ಆದರೆ ಇದಕ್ಕೆ ವಿರುದ್ದವಾಗಿ ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುರ್ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾಽಽ ಮಹಾಂತ ಶಿವಯೋಗಿಗಳು.
ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1 1930 ರಲ್ಲಿ ಜನಿಸಿದ ಡಾಽಽ ಮಹಾಂತ ಶಿವಯೋಗಿಗಳು ತಮ್ಮ 10 ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು, ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ಗ್ರಾಮಗಳ ಜಮೀನುದಾರರು, ಶ್ರೀಮಂತರನ್ನು ವಿನಂತಿಸಿ, ಧವಸ ಧಾನ್ಯ ಸಂಗ್ರಹಿಸಿ, ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ ದಾಸೋಹ ಮಾಡಿದ್ದು ಮಾತ್ರವಲ್ಲದೇ ಜಾನುವಾರುಗಳಿಗಾಗಿ ಪಶುಶಾಲೆ, ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು.
1970 ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಯಾಗಿ ನೇಮಕಗೊಂಡ ನಂತರ 2018 ರ ವರೆಗೆ ಅಖಂಡ 48 ವರ್ಷಗಳ ಕಾಲ ಅವರ ಸಾಧನೆ ಅಪಾರವಾದುದು. ಇದರಲ್ಲಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975 ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟ್ಠವಾದದ್ದು. ಕುಡಿತದ ಚಟದಿಂದ ಪ.ಜಾತಿಯ ಯುವಕನೊಬ್ಬ ನಿಧನದ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡ ಮಹಾಂತ ಶಿವಯೋಗಿಗಳು ಇಂತಹ ಸಾವಿರಾರು ಕುಟುಂಬಗಳು ಕುಡಿತ ಮತ್ತು ಇತರೇ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಇದರಿಂದ ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಅಂದೊಲನಾ ಆರಂಭಿಸಿದರು. ಮಹಾಂತ ಎಂದರೆ ಧರ್ಮಾಧಿಕಾರಿ, ಧರ್ಮದ ಗುರು ಅಥವಾ ಸ್ವಾಮೀಜಿ, ಜೋಳಿಗೆ ಎಂದರೆ ಬಟ್ಟೆಯ ಚೀಲ.
ಜಾತಿ-ಮತ-ಪಂಗಡ-ಧರ್ಮ-ಭಾಷೆೆ-ದೇಶವೆನ್ನದೇ , 42 ವರ್ಷಗಳ ಕಾಲ ಭಾರತ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಟಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ-ಕುಟುಂಬ-ಸಮಾಜ- ಗ್ರಾಮಗಳ ನಿರ್ಮಾಣ ಮಾಡುವುದರ ಜೊತೆಗೆ, ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ಚಟಗಳಿಗೆ ವ್ಯಸನಗಳಿಗೆ ದಾಸರಾದವರನ್ನು ಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳುಹಿ ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾದಂತೆ ಎಚ್ಚರ ಮೂಡಿಸಿದ ಪರಿಣಾಮ , ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ಇಂದು ನೆಮ್ಮದಿಯ ಜೀವನ ಸಾಗಿಸುತ್ತಿವೆ.
ಮಹಾಂತ ಜೋಳಿಗೆಯ ಶಿವಶಿಲ್ಪಿ, ವ್ಯಸನ ಮುಕ್ತ ಆಂದೋಲನದ ಹರಿಕಾರರು ಆಗಿದ್ದ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1 ನ್ನು, ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಹಾಗೂ ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ.
ಜಿಲ್ಲೆಯ ಕ್ರಿಮ್ಸ್ ಆಸ್ಪತ್ರೆಯಲ್ಲಿ ಮದ್ಯ ವ್ಯಸನಿಗಳಿಗೆ ಮದ್ಯಪಾನ ಮುಕ್ತರಾಗುವ ಕುರಿತಂತೆ ಚಿಕಿತ್ಸೆ ಮತ್ತು ಕೌನ್ಸಿಲಿಂಗ್ ಸೌಲಭ್ಯವನ್ನು ಒದಗಿಸುತ್ತಿದ್ದು , ಜನವರಿ 2024 ರಿಂದ ಡಿಸೆಂಬರ್ ವರೆಗೆ 971 ಹೊರರೋಗಿಗಳಿಗೆ ಮತ್ತು 443 ಒಳರೋಗಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗಿದೆ, ಮದ್ಯ ಮತ್ತು ಮಾದಕ ವ್ಯಸನಿಗಳಿಗೆ ಈ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದರ ಜೊತೆಗೆ ನಿರಂತರವಾಗಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. : ಡಾ.ವಿಜಯ್ ರಾಜ್ ಎನ್, ಪ್ರೊಫೆಸರ್ ಮತ್ತು ಮನೋರೋಗ ವಿಭಾಗ ಮುಖ್ಯಸ್ಥರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 