ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ; ಬಿಎಲ್‌ಒ ಅಧಿಕಾರಿಗಳಿಗೆ ಸಹಕರಿಸಲು ಭರತ್ ಬೊಮ್ಮಾಯಿ ಮನವಿ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ; ಬಿಎಲ್‌ಒ ಅಧಿಕಾರಿಗಳಿಗೆ ಸಹಕರಿಸಲು ಭರತ್ ಬೊಮ್ಮಾಯಿ ಮನವಿ  Special comprehensive revision of voter list; Bharat Bommai appeals to BLO officials to cooperate

ಲೋಕದರ್ಶನ ವರದಿ  

ಶಿಗ್ಗಾವಿ 01: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆ-ಮನೆ ಸಮೀಕ್ಷೆ ನಡೆಸುತ್ತಿರುವ ಬಿಎಲ್‌ಒ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.  

ಪಟ್ಟಣದಲ್ಲಿ ಬಿಎಲ್‌ಒ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ರಾಜ್ಯಾದ್ಯಂತ ಇಂದಿನಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದರು.  

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು, ವಿಳಾಸ ಸೇರಿದಂತೆ ಎಲ್ಲ ವಿವರಗಳು ಸರಿಯಾಗಿ ದಾಖಲಾಗಿರುವುದನ್ನು ಪ್ರತಿಯೊಬ್ಬರೂ ಪರೀಶೀಲಿಸಿಕೊಳ್ಳಬೇಕು. ಅಗತ್ಯವಿರುವ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿ ಪರಿಷ್ಕರಣೆ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಹೇಳಿದರು.  

ಬಲಿಷ್ಠ ಪ್ರಜಾಪ್ರಭುತ್ವಕ್ಕೆ ನಿಖರವಾದ ಮತದಾರರ ಪಟ್ಟಿ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಈ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಭರತ್ ಬೊಮ್ಮಾಯಿ ತಿಳಿಸಿದರು.