ವಿಶ್ವವಿದ್ಯಾಲಯ ಮತ್ತು ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯಗಳಿಗೆ ಮುಂಬರುವ 2026 ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ
Special grants released in the upcoming 2026 state budget for the university and the world's only f
ಹಾವೇರಿ 30: ಜಿಲ್ಲೆಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯ ಮತ್ತು ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯಗಳಿಗೆ ಮುಂಬರುವ 2026 ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಿ ಈ ಎರಡೂ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಯಾಗಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ವತಿಯಿಂದ ಬುಧವಾರ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರಿಗೆ ಹಾವೇರಿ ಜಿಲ್ಲಾಧಿಕಾರಿಗಳಾದ ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಸಲ್ಲಿಸಲಾಯ್ತು. ಜಿಲ್ಲೆಯಲ್ಲಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯ ಮತ್ತು ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತ್ತಕೋತ್ತರ ಪದವಿಯ ವಿವಿಧ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ನೂರಾರು ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ ಬಹುತೇಕರು ಖಾಯಂಯೇತರ ಸಿಬ್ಬಂದಿಗಳಿದ್ದಾರೆ. ಸಂಬಳ ನೀಡಲಾಗದೇ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡುವ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೇ ಅಗತ್ಯ ಅನುದಾನ ಇಲ್ಲದೇ ಇರುವುದರಿಂದಾಗಿ ಅಗತ್ಯ ಕಟ್ಟಡಗಳು, ಉಪಕರಣಗಳು, ಸಿಬ್ಬಂದಿ ಕೊರತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ವಿ.ವಿಗಳು ಅಭಿವೃದ್ಧಿ ಹೊಂದಲು ಸಮಸ್ಯೆಯಾಗುತ್ತಿದೆ. ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಬೋದಕ ಮತ್ತು ಬೋದಕೇತರ ಸಿಬ್ಬಂದಿಗಳಿಗೂ ಸಹ ತೊಂದರೆಯಾಗುತ್ತಿದೆ. ಆದ್ದರಿಂದ ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಗಳಿಗೆ ಮುಂಬರುವ 2026 ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಿ ಈ ಎರಡೂ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಯಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಪೂಜಾರ, ಪರಿಮಳ ಜೈನ, ಸತೀಶ್ ಎಂ.ಬಿ, ಲಕ್ಷ್ಮೀಪ್ರಭ ಎಸ್ ಹುಲ್ಲೂರು, ಮಜೀದ್ ಎಸ್.ಎಚ್, ಮಂಜುನಾಥ ಸಣ್ಣಿಂಗಣ್ಣನವರ, ಖಲಂದರ ಅಲ್ಲಿಗೌಡ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 