ದಶಲಕ್ಷಣ ಮಹಾಪರ್ವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ
Special worship program as part of the Dashalakshana Mahaparva
ಲೋಕದರ್ಶನ ವರದಿ
ಹಾವೇರಿ 27 : ನಗರದ ಭಗವಾನ್ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ದಶಲಕ್ಷಣ ಮಹಾಪರ್ವದ ಅಂಗವಾಗಿ ಅನಂತ ನೋಂಪಿಕೆಯ ಕೊನೆಯ ದಿನವಾದ ಶನಿವಾರ ಬೆಳಗ್ಗೆಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಜಿನಮಂದಿರದ ಪಂಡಿತರಾದ ಶ್ರೇಣಿಕ ಉಪಾಧ್ಯಾಯ ಅವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ದಶಲಕ್ಷಣ ಮಹಾಪರ್ವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪೂಜಾ ಕಾರ್ಯಕ್ರಮದ ನಂತರ ಸಂಜೆ ಭಗವಾನ್ ಅನಂತನಾಥ ಸ್ವಾಮಿ ಜಿನಬಿಂಬದ ಪಾಲಕಿ ಉತ್ಸವ ಹಾಗೂ ಅಷ್ಟಮಂಗಳಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶ್ರಾವಕರು ಹಾಗೂ ಶ್ರಾವಕಿಯರು ಕೇಸರಿ ಮತ್ತು ಶ್ವೇತವರ್ಣದ ವಸ್ತ್ರಗಳನ್ನು ಧರಿಸಿ, ಭಗವಂತನ ಜಯಘೋಷ ಮೊಳಗಿಸುತ್ತಾ ಸಾಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಉತ್ಸವದ ಸಂಭ್ರಮ ಕಳೆಗಟ್ಟಿತ್ತು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 