ಬಾಗಲಕೋಟೆ 06: ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿವರ್ಾಹಣಾ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಶಾಸಕ ವೀರಣ್ಣ ಚರಂತಿಮಠ ಮಾಲಾರ್ಪಣೆ ಮಾಡಿ ಪುಷ್ಪ ಅಪರ್ಿಸಿದರು.
ನಂತರ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ಅಪರ್ಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ಜಗದೀಶ ಹೆಬ್ಬಳ್ಳಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.