ಬಾಗಲಕೋಟೆ 04: ಇಂದಿನ ಬದುಕೇ ಒತ್ತಡದ ಬದುಕಾಗಿದ್ದು, ಆ ಒತ್ತಡದ ಬದುಕಿನಿಂದ ಹೊರಬರಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪಧರ್ೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಒತ್ತಡದ ಬದುಕನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದರು.
ಆಟಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವದಿಂದ ಅದರಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದರಿಂದ ತಮ್ಮ ಪ್ರತಿಭೆಗಳ ಜೊತೆಗೆ ಮೂಲಭೂತ ಗುಣಗಳನ್ನು ಹೊರಹಾಕುತ್ತದೆ. ತೀವ್ರ ಒತ್ತಡಗಳನ್ನು ನಿಯಂತ್ರಿಸುವ ಶಕ್ತಿ ಕ್ರಿಡೆಗಳಿಗೆ ಇದೆ. ಹಾಗಾಗಿ ಕ್ರಿಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ಮನಸ್ಸು, ಆರೋಗ್ಯಕರ ಶರೀರ ಕಾಪಾಡಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸೌಹಾರ್ದತೆ ಬೆಳೆವಣಿಗೆಗೂ ಅವಕಾಶ ಕಲ್ಪಿಸುವದರ ಜೊತೆಗೆ ಹೊಸ ಹೊಸ ಸ್ನೇಹಿತರನ್ನು ಪಡೆಯಬಹುದಾಗಿದೆ ಎಂದರು.
ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಅವರು ಕೆಲಸದ ಒತ್ತಡದಿಂದ ಹೊರಬರಲು, ಗಟ್ಟಿಗೊಳ್ಳಲು ಕ್ರೀಡೆಗಳು ಸಹಕಾರಿಯಾಗಿದ್ದು, ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಡೆ ಎಂದರೆ ಚೈತನ್ಯ. ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ ಎಂದರು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ ಅವರು ಮಾನಸಿಕವಾಗಿ, ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷೆತೆಯನ್ನು ವಹಿಸಿದ್ದ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಮಖಂಡಿ ಉಪವಿಭಾಗಾಧಿಕಾರಿ ಇಕ್ರಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಪಿ.ಎಂ.ಸರಶೆಟ್ಟಿ, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಸ್.ವ್ಹಿ.ಸತ್ಯರಡ್ಡಿ, ಗೌರಕಾರ್ಯದಶರ್ಿ ಎಸ್.ಕೆ.ಹಿರೇಮಠ, ಕಾರ್ಯದಶರ್ಿ ಎಂ.ಎಸ್.ಲೋಕಾಪೂರ, ಕ್ರೀಡಾ ಕಾರ್ಯದಶರ್ಿ ವೆಂಕಟೇಶ ತಿಮ್ಮನಾಯ್ಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಕಳೆದ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟಗಳಲ್ಲಿ ಭಾಗವಹಿಸಿ 11 ಸ್ಪಧರ್ೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದವರನ್ನು ಅಭಿನಂಧಿಸುವದರ ಜೊತೆಗೆ ಗುಂಪು ಸ್ಪಧರ್ೆಯಾದ ಕಬಡ್ಡಿಯಯಲ್ಲಿ ರಾಜ್ಯ ಮಕ್ಕದಲ್ಲಿ ಪ್ರಥಮ ಸ್ಥಾನ ಪಡೆದ ತಂಡದವರನ್ನು ಇದೇ ಸಂದರ್ಭದಲ್ಲಿ ಸತ್ಕರಿಸಲಾಯಿತು. ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹಾಗೂ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಗಳಿಗೆ ಚಾಲನೆ ನೀಡಿದರು.