ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗ ಪ್ರಾಚಾರ್ಯೆ:ಡಾ.ರಾಬಿಯಾ ಎಂ.ಮಿರ್ಧೆ
Sports are an integral part of our lives, Principal: Dr. Rabia M. Mirdhe
ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗ ಪ್ರಾಚಾರ್ಯೆ:ಡಾ.ರಾಬಿಯಾ ಎಂ.ಮಿರ್ಧೆ
ವಿಜಯಪುರ 29: ಇಂದಿನ ದಿನನಿತ್ಯದ ಅವಸರ ಯುಗದಲ್ಲಿ ಎಲ್ಲರೂ ದೈಹಿಕ ಚಟುವಟಿಕೆಗಳನ್ನು ಮರೆಯುತ್ತಿದ್ದಾರೆ ಪ್ರತಿಯೊಬ್ಬರು ದೈಹಿಕ ಚಟುವಟಿಕೆಗಳು ಮತ್ತು ಕ್ರೀಡೆಗಳತ್ತ ಆಸಕ್ತಿ ತೋರಿಸುವುದು ಅತ್ಯಂತ ಅವಶ್ಯವಾಗಿದೆ ಎಂದು ಪ್ರಾಚಾರ್ಯೆ ಡಾ ಆರ್ ಎಂ. ಮಿರ್ಧೆ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಕ್ರೀಡಾ ವಿಭಾಗದ ಸಹಯೋಗದಲ್ಲಿ ದಿನಾಂಕ 29-08-2025 ಶುಕ್ರವಾರದಂದು ಜರುಗಿದ ‘ರಾಷ್ಟ್ರೀಯ ಕ್ರೀಡಾ’ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿ ವರ್ಷವೂ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ. ಹಾಕಿ ಮಾಂತ್ರಿಕ' ಭಾರತದ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಸಿಂಗ್, 1905 ರ ಆಗಸ್ಟ್ 29 ರಂದು ಇಂದಿನ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನಿಸಿದರು. ಇವರ ಜನ್ಮ ದಿನಾಚರಣೆ ಹಿನ್ನೆಲೆ ಪ್ರತಿ ವರ್ಷವು ಈ ದಿನದಂದು ರಾಷ್ಟ್ರೀಯ ಕ್ರೀಡಾ ದಿವೆಂದು ಆಚರಿಸಲಾಗುತ್ತಿದೆ. ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ದಿನನಿತ್ಯದ ಜೀವನದಲ್ಲಿ ದೈಹಿಕವಾಗಿ ಸಕ್ರಿಯವಾಗಿಸುವುದು ರಾಷ್ಟ್ರೀಯ ಕ್ರೀಡಾ ದಿನದ ಮೂಲ ಧ್ಯೇಯವಾಗಿದೆ “ಏಕ್ ಘಂಟಾ ಕೇಲ್ ಕೆ ಮೈದಾನ ಮೇ”ಎಂಬ ಧ್ಯೇಯದಡಿ ಪ್ರತಿ ವ್ಯಕ್ತಿ ದಿನಕ್ಕೆ ಕನಿಷ್ಠ 60 ನಿಮಿಷ ಗಳನ್ನೂ ದೈಹಿಕ ಚಟುವಟಿಕೆಗಳಿಗೆ ಮೀಸಲಿರಿಸುವ ಬಗ್ಗೆ ಈ ದಿನ ಜಾಗೃತಿ ಮೂಡಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಸಾರ್ವಜನಿಕರು ಕ್ರೀಡೆಗಳನ್ನು ಕೈಗೆತ್ತಿಕೊಳ್ಳಲು ಮತ್ತು ಅದನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಕ್ರೀಡಾ ದಿನ ಪ್ರಯುಕ್ತ ಪ್ರಮಾಣ ವಚನ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡಾ.ಅನೀಲ ಭೀ.ನಾಯ, ಐಕ್ಯೂಎಸಿ ನಿರ್ದೇಶಕ ಡಾ.ಪಿ ಎಸ್ ಪಾಟೀಲ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ, ಪಿಯುಸಿ ಉಪಪ್ರಾಚಾರ್ಯ ಪ್ರೊ.ವ್ಹಿ ಎಸ್ ಡೊಣಗಾಪುರ, ಎನ್ ಎಸ್ ಎಸ್ ಅಧಿಕಾರಿ ಡಾ.ತರನ್ನುಮ್ ಜಬೀನ್‌ಖಾನ, ಪ್ರೊ.ರೂಪಾ ಮೋಟಗಿ, ಪ್ರೊ.ಮಲಿಕ್ ಎಲ್ ಜಮಾದಾರ, ಪ್ರೊ.ಎಂ.ಎಸ್ ಜೇವೂರ, ಸುರೇಶ. ಜಿಂಜರವಾಡ, ಈರಣ್ಣ ಕಂಠೆಣ್ಣವರ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ,ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 