ಕ್ರೀಡಾಕೂಟ: ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಕಾರ್ತಿಕ್ ಅಡ್ಡಿ ಆಯ್ಕೆ
Sports event: Karthik Addi selected for state-level wrestling competition
ಕ್ರೀಡಾಕೂಟ: ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಕಾರ್ತಿಕ್ ಅಡ್ಡಿ ಆಯ್ಕೆ
ರಾಣೇಬೆನ್ನೂರು 12: ಇಲ್ಲಿನ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ರಾಜ ರಾಜೇಶ್ವರಿ ಸಂ. ಪ. ಪೂರ್ವ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಹನುಮಂತಪ್ಪ ಅಡ್ಡಿ ಈತನು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಮುಂದೆ ನಡೆಯಬಹುದಾದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ತಾಲೂಕು ಮತ್ತು ಜಿಲ್ಲೆಗೆ ಹಾಗೂ ನಾಡಿಗೆ ಕೀರ್ತಿ ತಂದಿದ್ದಾನೆ.
2025 ಮತ್ತು 26ನೇ ಸಾಲಿನ ಈ ವಾರ್ಷಿಕ ಕುಸ್ತಿ ಕ್ರೀಡಾಕೂಟವು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿತ್ತು. ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಕ್ರೀಡಾಪಟು ಕಾರ್ತಿಕ್ ಪ್ರಥಮ ಸ್ಥಾನ ಪಡೆದು ಪದವಿ ಪೂರ್ವ ಕಾಲೇಜಿಗೆ ಸಾಧಕ ವಿದ್ಯಾರ್ಥಿಯಾಗಿದ್ದಾನೆ.
ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗೆ, ಆಯ್ಕೆಯಾಗಿರುವ ಕಾರ್ತಿಕ್ ಅಡ್ಡಿ ಅವರಿಗೆ ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ವಿ.ಪಿ.ಲಿಂಗನಗೌಡ್ರು ಅವರು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಚಾರ ಪಿ. ಪ್ರಹ್ಲಾದ್, ದೈಹಿಕ ಶಿಕ್ಷಕಿ ರೂಪಾ ಕಡೂರ, ಪ್ರಕಾಶ್ ಭೋಸ್ಲೆ ಸೇರಿದಂತೆ ಪ್ರೌಢ ಶಾಲೆಯ ಶಿಕ್ಷಕರು ಸಿಬ್ಬಂದಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 