ಕ್ರೀಡೆಯಿಂದ ಮಕ್ಕಳಿಗೆ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯ
Sports help children have a strong body and a strong mind.
ಕ್ರೀಡೆಯಿಂದ ಮಕ್ಕಳಿಗೆ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯ
ಕಾಗವಾಡ 02:ಕಲಿಕೆ ಜೊತೆಗೆ ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಬೇಕು ಆಗ ಮಾತ್ರ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯವಾಗುತ್ತದೆ ಎಂದು ಕವಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.ಅವರು ಸೋಮವಾರ ಕವಲಗುಡ್ಡ ಗ್ರಾಮ ಸಿದ್ಧರತ್ನ ಪ್ರೌಢ ಶಾಲೆಯಲ್ಲಿ ಆರಂಭವಾದ ತಾಲ್ಲೂಕು ಮಟ್ಟದ ಕುಸ್ತಿ ಹಾಗೂ ಕರಾಟೆ ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಯ ಆರೋಗ್ಯವಂತ ಸಮಾಜದ ನಿರ್ಮಾಣ ಆಗಬೇಕಾದರೆ ಶಾಲಾ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪಾಲಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಅದರಲ್ಲೂ ದೇಶಿ ಕ್ರೀಡೆಯಾದ ಕಬ್ಬಡ್ಡಿ ಆಟ ದೈಹಿಕವಾಗಿ ಮಾನಸಿಕ ಬೆಳವಣಿಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದರು.ಎರಡು ದಿನಗಳ ಕಾಲ ನಡೆದ ಪಂದ್ಯವಾಳಿಗಳಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ಸುಮಾರು 110 ವಿಧ್ಯಾರ್ಥಿಗಳು ಭಾಗವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಪಿ ಬಿ ಮಧಬಾವಿ ದೈಹಿಕ ಶಿಕ್ಷಣ ಪರೀವೀಕ್ಷಕ ಎಮ್ ವಾಯ್ ಪೂಜಾರಿ, ಶಿಕ್ಷಣ ಸಂಯೋಜಕ ಎಸ್ ಆರ್ ಮಾಳಿ,ಬಂಡು ಜಗತಾಪ,ಎಸ್ ಪಿ ಸಂಬೋಜಿ,ಬಿ ಎ ಮೇಂಡಿಗೇರಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕಿನ ಎಲ್ಲಾ ದೈಹಿಕ ಶಿಕ್ಷಕರು ಇದ್ದರು.ಕಾರ್ಯಕ್ರಮವನ್ನು ಅಶ್ವಥ ಪೂಜಾರಿ ನಿರೂಪಿಸಿದರು ಮುಖ್ಯೋಪಾಧ್ಯಾಯ ಎಸ್ ಎಮ್ ಲಾಳಿ ಸ್ವಾಗತಿಸಿದರು ದೈಹಿಕ ಶಿಕ್ಷಕ ಕಿರಣ ಪಾಟೀಲ ವಂದಿಸಿದರು.
ಫೋಟೋ ಶೀರ್ಷಿಕೆ:02 ಕಾಗವಾಡ-1 ಕಾಗವಾಡ ತಾಲ್ಲೂಕಿನ ಕವಲಗುಡ್ಡ ಗ್ರಾಮದ ಸಿದ್ಧರತ್ನ ಪ್ರೌಢ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಉದ್ಘಾಟಿಸಿದರು. ಬಿಇಒ ಪಿ ಬಿ ಮಧಬಾವಿ ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 