ಕ್ರೀಡೆ ನಮ್ಮ ಬದುಕಿಗೆ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗಲಿದೆ- ಸಂಸದ ಹಿಟ್ನಾಳ

ಕ್ರೀಡೆ ನಮ್ಮ ಬದುಕಿಗೆ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗಲಿದೆ- ಸಂಸದ ಹಿಟ್ನಾಳ Sports will add enthusiasm and vitality to our lives - MP Hitnala


         ಕೊಪ್ಪಳ 19: ಕ್ರೀಡೆಗಳಿಂದ ನಮ್ಮಲ್ಲಿ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗುವುದರ ಜೊತೆಗೆ ಎಲ್ಲರೂ ಒಂದು ಕಡೆ ಸೇರಲು ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಇಂದು ತಾವೆಲ್ಲರೂ ಇಲ್ಲಿ ಸೇರಿದ್ದಿರಾ ಎಂದು ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. 

ಅವರು ಸೋಮವಾರ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ಬೆಂಗಳೂರು, ಜಿಲ್ಲಾ ಶಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಕೊಪ್ಪಳ ಜಿಲ್ಲೆಯ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಗುಂಡು ಎಸೆಯುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು. 

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಕ್ರೀಡೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವುದಕ್ಕಿಂತ ಇದರಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಸರಕಾರಿ ನೌಕರರು ಇತ್ತಿಚೆಗೆ ಹೆಚ್ಚಿನ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕ್ರೀಡೆಯಂತಹ ಇತರೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಗ್ರಾಮೀಣ ಭಾಗದ ಕ್ರೀಡೆ ಕಬ್ಬಡಿಯಿಂದ ನಮಗೆ ಮತ್ತಷ್ಟು ಬಲ ತರಲಿದೆ. ಬಿಸಿಲು ನಾಡಿನ ಜನ ನಾವು ಬಹಳ ಗಟ್ಟಿ. ಮನೋಬಲದಿಂದ ನಮ್ಮ ಉತ್ಸಾಹ ಇನ್ನಷ್ಟು ಹೆಚ್ಚಾಗಲಿದೆ. ಪುಟ್ಬಾಲ್, ಹಾಕಿ, ವಾಲಿಬಾಲನಂತಹ ಕ್ರೀಡೆಗಳಿಗೆ ನಮ್ಮಲ್ಲಿ ಇನ್ನೂ ಸುಸಜ್ಜಿತ ಟ್ರ್ಯಾಕಗಳು ಆಗಬೇಕಿದೆ ಎಂದು ಹೇಳಿದರು. 

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರಾದ ವಿಠ್ಠಲ ಜಾಬಗೌಡರ್‌. ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಜೋಗಿ, ಖಜಾಂಚಿ ಜಯತೀರ್ಥ ದೇಸಾಯಿ, ರಾಜ್ಯ ಪರಿಷತ್ ಸದಸ್ಯರಾದ ಮೆಹಮೂದ್ ಆಸೀಫ್ ಅಲಿ, ಗೌರವ ಅಧ್ಯಕ್ಷರಾದ ಸಿದ್ದಪ್ಪ ಮೇಳಿ, ಕಾರ್ಯಾಧ್ಯಕ್ಷರಾದ ಬೀರ​‍್ಪ ಅಂಡಗಿ, ರಾಜ್ಯ ಸಂಘಟನಾ ಪದಾಧಿಕಾರಿಗಳಾದ ಮಹೇಶ ಸಬರದ, ಮಂಜುನಾಥ ಆರೆಂಟನೂರ, ಶ್ರೀ ನಿವಾಸ ನಾಯಕ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನೌಕರರ ಸಂಘದ ಇತರೆ ಪದಾಧಿಕಾರಿಗಳು ಮತ್ತು ಸರಕಾರಿ ನೌಕರರು ಉಪಸ್ಥಿತರಿದ್ದರು.