ಶ್ರೀ ಕೃಷ್ಣದೇವರಾಯ ಜಯಂತಿ ಆಚರಣೆ ಹಾಗೂ ಸಾಧಕರಿಗೆ ಸನ್ಮಾನ
Sri Krishnadevaraya Jayanti Celebration and Tribute to the Sages
ಬಳ್ಳಾರಿ 18: ನಗರದಲ್ಲಿ ಬಲಿಜ ಸಂಘದ ವತಿಯಿಂದ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ಜಯಂತಿಯನ್ನು ರಮೇಶ್ ಬುಜ್ಜಿ ಅವರ ನೇತೃತ್ವದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಕುಲಬಾಂಧವರನ್ನು ಗುರುತಿಸಿ ಗೌರವಿಸಲಾಯಿತು.ಕುಮಾರಿ ತನುಜಾ ಶ್ರೀ: ಕುಚಿಪುಡಿ ನೃತ್ಯ ಯಲ್ಲಿ ವಿಶ್ವ ಮಟ್ಟದಲ್ಲಿ ಗಮನ ಸೆಳೆದು ಗಿನ್ನೆಸ್ ಬುಕ್ ಆಫ್ ವರ್ಲ್ಡ ರೆಕಾರ್ಡ್ಸ ಸೇರೆ್ಡಯಾದ ಸಾಧನೆಗಾಗಿ ಇವರನ್ನು ಸನ್ಮಾನಿಸಲಾಯಿತು. ಕಪ್ಪಗಲ್ಲು ಮುನಿಸ್ವಾಮಿಯವರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು, ಅನೇಕ ಸಾಮೂಹಿಕ ವಿವಾಹಗಳನ್ನು ಯಶಸ್ವಿಯಾಗಿ ಆಯೋಜಿಸಿ ’ಡಾಕ್ಟರೇಟ್’ ಗೌರವಕ್ಕೆ ಪಾತ್ರರಾದ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತರಾದ ಇವರನ್ನು ಬಲಿಜ ಸಂಘದ ವತಿಯಿಂದ ಗೌರವಿಸಲಾಯಿತು.ಶ್ರೀ ಕೃಷ್ಣದೇವರಾಯರ ಕುರಿತು ಬಲಿಜ ಸಂಘದ ಅಧ್ಯಕ್ಷರಾದ ರಮೇಶ್ ಬುಜ್ಜಿಯವರು ಶ್ರೀ ಕೃಷ್ಣದೇವರಾಯರ ಜೀವನ ಮತ್ತು ಸಾಧನೆಗಳ ಬಗ್ಗೆ ಮಾತನಾಡುತ್ತಾ"ಕೃಷ್ಣದೇವರಾಯರು ಕೇವಲ ಒಬ್ಬ ರಾಜನಲ್ಲ, ಅವರು ಸಾಹಿತ್ಯ, ಕಲೆ ಮತ್ತು ಧರ್ಮದ ರಕ್ಷಕರಾಗಿದ್ದರು. ಅವರ ಆಡಳಿತದ ಕಾಲವು ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗವಾಗಿತ್ತು. ಅವರ ಧೈರ್ಯ ಮತ್ತು ದೂರದೃಷ್ಟಿ ಇಂದಿನ ಪೀಳಿಗೆಗೆ ಮಾದರಿ," ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿ, ಉದಯ ಭಾಸ್ಕರ್,ನಾರಾಯಣಪ್ಪ,ರಂಗಸ್ವಾಮಿರಂಗನಾಥ್, ಸತ್ಯ ನಾರಾಯಣ, ಕೃಷ್ಣ, ಬಸವರಾಜ್, ಪ್ರಭಾಕರ್, ವೀರೇಶ್ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 