ಸಿಂದಗಿ 19:ಸಿಂದಗಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶನಿವಾರ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂತರ್ಿಗಳ ಪಲ್ಲಕ್ಕಿ ಉತ್ಸವದ ಮೇರವಣಿಗೆ ಮತ್ತು ರಥೋತ್ಸವ ನೀಲಗಂಗಾದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.
ದೇವಸ್ಥಾನದಲ್ಲಿ ಮತ್ತು ಮಾರ್ಗ ಮಧ್ಯ ನೀಲಗಂಗಾ ದೇವಸ್ಥಾನ ಹಾಗೂ ಹಳೆ ಬಜಾರದ ಮಧ್ಯದಲ್ಲಿ ವಿಶ್ವನಾಥ ಬಡಿಗೇರ ಹಾಗೂ ಸಂಗಡಿಗರು ಪುರವಂತರ ಸೇವೆ ಸಲ್ಲಿಸಿದರು. ಪುರವಂತರ ಸೇವೆಯೊಂದಿಗೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಮಾರ್ಗದುದ್ದಕ್ಕೂ ಭಕ್ತಾಧಿಗಳು ಉತ್ಸವ ಪಲ್ಲಕ್ಕಿಯಲ್ಲಿರುವ ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂತರ್ಿಗಳಿಗೆ ಆರತಿ ಮತ್ತು ಪೂಜೆ ಸಲ್ಲಿಸೂವ ಮೂಲಕ ದೇವರ ಕೃಪೆಗೆ ಪಾತ್ರರಾದರು.
ಸ್ಥಳಿಯ ಸಾರಂಗಮಠ-ಗಚ್ಚಿನಮಠದ ಶ್ರೀ ಪ್ರಭುಸಾರಂಗದೇವ ಶಿವಾಚಾರ್ಯರು, ಶ್ರೀ ಭೀಮಾಶಂಕರಮಠದ ಶ್ರೀ ದತ್ತಪ್ಪಯ್ಯ ಮಹಾಸ್ವಾಮಿಗಳು, ಪಂಡಿತ ಕುಲಕಣರ್ಿ, ವಿಜಯ ಕುಲಕಣರ್ಿ, ರಾಮ ಕುಲಕಣರ್ಿ, ಕೃಷ್ಣ ಕುಲಕಣರ್ಿ, ಚಿಂತು ಕುಲಕಣರ್ಿ, ಅಶೋಕ ವಾರದ, ಅಶೋಕ ಮನಗೂಳಿ, ನೀಲಗಂಗಾದೇವಿ ದೇವಸ್ಥಾನದ ಧರ್ಮದಶರ್ಿ ಶಿರುಗೌಡ ದೇವರಮನಿ, ಶ್ರೀಶೈಲ ನಂದಿಕೋಲ, ಸಂಗಮೇಶ್ವರ, ಮಲ್ಲಿಕಾಜರ್ುನ ಹಾಗೂ ಬೊಮ್ಮಲಿಂಗೇಶ್ವರ ದೇವಸ್ಥಾನಗಳ ಅರ್ಚಕರು, ಸ್ಥಳಿಯ ಹಾಗೂ ಸುತ್ತಮೂತ್ತಲಿನ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವವಿಸಿದ್ದರು. ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಮರುಳಿ ದೇವಸ್ಥಾನಕ್ಕೆ ಬಂದ ನಂತರ ಭಕ್ತರು ನೆವಿದ್ದೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.