ಶ್ರೀ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಶ್ರೀ ಶಿವಶಾಂತವೀರ ಶರಣರು ಅವರಿಗೆ ಗೌರವ ಸನ್ಮಾನ
ಹುಬ್ಬಳ್ಳಿ, 27; ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಗದಗ ಜಿಲ್ಲಾ ಬಳಗಾನೂರ ಸುಕ್ಷೇತ್ರ ಪರಮಪೂಜ್ಯ ಶ್ರೀ ಶಿವಶಾಂತವೀರ ಶರಣರು ಅವರಿಗೆ ಶ್ರದ್ಧಾ, ಭಕ್ತಿಯಿಂದ ಮಾಲಾರೆ್ಣ ಮಾಡಿ, ಗ್ರಂಥ ನೀಡಿ ಹೃದಯಪೂರ್ವಕ ಗೌರವ ನಮನಗಳನ್ನು ಸಲ್ಲಿಸಲಾಯಿತು.
ದರ್ಶನ ಆಶೀರ್ವಾದ ಪಡೆದ ಸಂದರ್ಭದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರಿಗೆ ಪರಮಪೂಜ್ಯ ಶ್ರೀ ಶಿವಶಾಂತವೀರ ಶರಣರು ಅವರು ಮಾಲಾರೆ್ಣ ಮಾಡಿ ಶುಭಾಶೀರ್ವಾದ ಮಾಡಿದರು. ಆಧ್ಯಾತ್ಮ ಜೀವಿಗಳಾದ ಅಜ್ಜಪ್ಪ ಹೊರಕೇರಿ ಇದ್ದರು.