ವಿಜೃಂಭಣೆಯಿಂದ ಜರುಗಿದ ಶ್ರೀ ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
Sri Siddeshwara Swamy Palanki Festival celebrated with great pomp
ವಿಜೃಂಭಣೆಯಿಂದ ಜರುಗಿದ ಶ್ರೀ ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
ಹೂವಿನ ಹಡಗಲಿ 10: ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಶ್ರಾವಣ ಮಾಸ ನೂಲ ಹುಣ್ಣುಮೆ ಪ್ರಯುಕ್ತ ಶ್ರೀ ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಸ್ವಾಮಿಗೆ ಅಭಿಷೇಕ. ಬಿಲ್ವಾರ್ಜನೆ. ಮಹಾ ಮಂಗಳಾರತಿ ಸೇರಿದಂತೆ ಪೂಜಾ ಕಾರ್ಯಕ್ರಮಗಳು ನಡೆದವು.ಅಳವುಂಡಿ ಹಿರೇಮಠ ಮರುಳಾರಾದ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಬೆಳಿಗ್ಗೆ 11ಕ್ಕೆ ಗ್ರಾಮದ ಮಧ್ಯಭಾಗದಲ್ಲಿ ರುವ ಶ್ರೀ ವೀರಭದ್ರೇಶ್ವರ ದೇವಸ್ಥಾನ ದಿಂದ ವಿವಿಧ ಹೂಗಳಿಂದ ಅಲಂಕೃತಗೊಂಡಿದ್ದ ಸ್ವಾಮಿಯನ್ನು ಪಲ್ಲಕ್ಕಿಯನ್ನು ಅಲಂಕೃತಗೊಳಿಸಲಾಯಿತು. ಸ್ವಾಮಿಯ ಉತ್ಸವದ ಪ್ರಯುಕ್ತ ನಂದಿಕೋಲು, ತಮಟೆ, ವೀರಗಾಸೆ ಕುಣಿತ, ಮಂಗಳವಾದ್ಯಗಳೊಂದಿಗೆ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು.ಡ್ರಮ್ ಮೆರವಣಿಗೆ ಯಲ್ಲಿ ಮೆರಗು ಹೆಚ್ಚಿಸಿದರು. ಪಲ್ಲಕ್ಕಿ ಸಾಗಿದ ಕಡೆಯಲೆಲ್ಲಾ ಭಕ್ತರು ಹಣ್ಣುಕಾಯಿ ಅರ್ಿಸಿ ಪುನೀತರಾದರು. ಉತ್ಸವ ಮೆರವಣಿಗೆ ಸಿದ್ದೇಶ್ವರ ದೇವಸ್ಥಾನದಲ್ಲಿ ಸಂಪನ್ನಗೊಡಿತು. ದೇವಸ್ಥಾನ ದ ಪದಾಧಿಕಾರಿಗಳು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 