ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ
Srimad Rambhapuri Veera Simhasanadishwara Addapallakki Mahotsav
ಶಿಗ್ಗಾವಿ 31 : ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದ ಸಾವಿರಾರು ಭಕ್ತಸಮೂಹದ ನಡುವೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಪ್ರಾತಃಕಾಲ 6 ಗಂಟೆಗೆ ಶ್ರೀ ಬಸವಣ್ಣ ದೇವರ ಮೂರ್ತಿಗೆ ಮಹಾ ರುದ್ರಾಭಿಷೇಕ ನಂತರ ಕಳಸ ಪೂಜೆ ಬೆಳಿಗ್ಗೆ 9 ಘಂಟೆಗೆ ರಥಕ್ಕೆ ಕಳಸಾರೋಹಣ ಮಧ್ಯಾಹ್ನ 2 ಗಂಟೆಗೆ ವಿಜೃಂಭಣೆಯಿಂದ ಅಡ್ಡಪಲ್ಲಕ್ಕಿ ಮಹೋತ್ಸವ ಜರಗಿತು, ಕುಂಭ ಹೊತ್ತ ಮಹಿಳೆಯರು ಅಡ್ಡ ಪಲ್ಲಕ್ಕಿ ಮಹೋತ್ಸವಕ್ಕೆ ಮೆರಗು ತಂದರು.ಈ ಸಂದರ್ಭದಲ್ಲಿ ವಿವಿಧ ಮಠಾಧೀಶರಾದ ಮುಕ್ತಿಮಂದಿರದ ಶ್ರಿ?ವಿಮಲರೇಣುಕ ವಿ?ರಮುಕ್ತಿಮುನಿ ಶಿವಾಚಾರ್ಯರು, ಬಂಕಾಪೂರ ಅರಳೆಲೆಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು, ಗಂಜೀಗಟ್ಟಿ ಚರ್ಮತೇಶ್ವರ ಮಠದ ವೈಜಿನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಣಕಟ್ಟಿಯ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಗ್ರಾಮದ ಮುಖಂಡರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 