47 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
Srinivasa Mane performs Bhoomi Pooja for various development works costing Rs. 47 lakhs
ಹಾನಗಲ್ 20: ತಾಲೂಕಿನ ಡೊಳ್ಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೊಳ್ಳೇಶ್ವರ ಮತ್ತು ಸೇವಾಲಾಲ ಗ್ರಾಮದಲ್ಲಿ 47 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. 2025-26 ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಡೊಳ್ಳೇಶ್ವರ ಗ್ರಾಮದಲ್ಲಿ ? 26 ಲಕ್ಷ ವೆಚ್ಚದಲ್ಲಿ ಹಾಗೂ ಸೇವಾಲಾಲ ಗ್ರಾಮದಲ್ಲಿ ? 21 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಸಿಸಿರಸ್ತೆ, ಸಿಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಒಂದು ಸಾವಿರ ದಿನ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಜನಕಲ್ಯಾಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಸಹ ಕೈಗೆತ್ತಿಕೊಳ್ಳಲಾಗಿದೆ. ತಾಲೂಕಿನಲ್ಲಿ ಪ್ರತಿಯೊಂದು ಗ್ರಾಮಗಳಿಗೆ ಅನುದಾನ ದೊರಕಿಸಲಾಗಿದೆ. ಗ್ರಾಮಸ್ಥರು ಇಚ್ಛಿಸಿದ ಕಾಮಗಾರಿ ಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಶ್ರೀನಿವಾಸ ಮಾನೆ ತಿಳಿಸಿದರು.ಗ್ರಾಪಂ ಅಧ್ಯಕ್ಷ ಮಲ್ಲಪ್ಪ ಕುರುಬರ, ಸದಸ್ಯರಾದ ಸಂಜೀವ ಕುಂಟನಹೊಸಳ್ಳಿ, ಸಹೀನಾಬಾನು ಶಾಡಗುಪ್ಪಿ, ಗಂಗವ್ವ ಲಮಾಣಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ರಾಜೇಶ ಚವ್ಹಾಣ, ಕೀರ್ಪ ಕಾರಬಾರಿ, ಕೃಷ್ಣಪ್ಪ ಲಮಾಣಿ, ದ್ಯಾಮಜ್ಜ ಕಲವೀರಣ್ಣನವರ, ಗಣಪತಿ ಬಾರ್ಕಿ, ಮುಜಾಪೀರ್ ಹಾವೇರಿ, ಮುಜಾಪೀರ್ ಬಿಜಾಪುರ, ಮಂಜಪ್ಪ ಆರೇರ, ಮುಕ್ತಾರ ಮಟ್ಟಿಮನಿ, ದುಂಡಪ್ಪ ಡಾವ್ ಸೇರಿದಂತೆ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 