ಉದ್ಯಮ ಆರಂಭಿಸಿ, ಉದ್ಯೋಗ ನೀಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ 04: ಉದ್ಯೋಗ ಪಡೆದುಕೊಳ್ಳುವುದಷ್ಟೇ ಅಲ್ಲದೇ, ಉದ್ಯಮ ಸ್ಥಾಪನೆ ಮಾಡುವ ಮೂಲಕ ಉದ್ಯೋಗ ನೀಡುವಂತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ “ಕೌಶಲ್ಯ ಮತ್ತು ರೋಜ್‌ಗಾರ್ ಮೇಳ” ಅಡಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ (ಸ್ವಾಯತ್ತ) ನಲ್ಲಿ ಶುಕ್ರವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.