ರಾಜ್ಯದ ಸಮಸ್ತ ನಾಗರಿಕರ ಅಭಿವೃದ್ಧಿಗೆ ಮುನ್ನುಡಿ ಗೈದ : ರಾಜ್ಯ ಬಜೆಟ್ : ರಾಘವೇಂದ್ರ ಪಾಲನಕರ
ಗದಗ 07:-ವಿಧಾನಸೌಧಕ್ಕೆ ಆಗಮಿಸಿ ಗೆಲುವಿನ ನಗೆ ಬೀರುತ್ತ ಬೆಂಬಲಿಗರು, ಅಧಿಕಾರಿಗಳ ಜೊತೆ ವಿಧಾನಸೌಧಕ್ಕೆ ಬಂದ ಸನ್ಮಾನ್ಯ ಸಿದ್ದರಾಮಯ್ಯನವರು ಬಜೆಟ್ ಪ್ರತಿ ಇರುವ ಕಂದು ಬಣ್ಣದ ಬ್ಯಾಗ್ ಅನ್ನು ಮಾಧ್ಯಮಗಳಿಗೆ ಪ್ರದರ್ಶನ ಮಾಡಿದರು.ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರೀದೀಪವಾಗಲಿದೆ ಎಂಬುದು ನಿಸ್ಸಂಶಯವಾಗಿದೆ. ಎನ್ನುತ್ತಾ ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ಕೃತಜ್ಞತೆಯನ್ನು ಸಲ್ಲಿಸಿ ಸನ್ 2025-26 ನೇ ಸಾಲಿನ ಬಜೆಟ್ನಲ್ಲಿ ತಮ್ಮ ಒಂದು ಅಭೂತಪೂರ್ವ ಕೊಡುಗೆಯಾಗಿ 4,09,549 ಕೋಟಿ ಗಳ ಬ್ರಹತ್ ಬಜೆಟ್ ನ್ನು ಸಮಸ್ತ ರಾಜ್ಯವ್ಯಾಪಿ ರಹವಾಸಿಯಾಗಿರುವ ನಾಗರಿಕರ ಸಾಮಾಜಿಕ, ಆರ್ಥಿಕ, ಸೈಕ್ಷಣಿಕ, ಶ್ರೇಯೋಭೀವೃದ್ಧಿಯೊಂದಿಗೆ ನಾಡಿನ ಸಮಸ್ತ ನಾಗರಿಕರಿಗೆ ಪೂರಕವಾಗಿ ಬಜೆಟ್ ಮಂಡಿಸಿರುವರು. ಅವರು ಪ್ರಮುಖವಾಗಿ ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗಸೃಷ್ಟಿವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆಇಲಾಖೆ ಅನುದಾನಶಿಕ್ಷಣ ಇಲಾಖೆ45, 286 ಕೋಟಿಇಂಧನ 26, 896 ಕೋಟೀನೀರಾವರಿ 22,181 ಕೋಟಿಆರೋಗ್ಯ17, 473 ಕೋಟಿಕಂದಾಯ 17, 201 ಕೋಟಿಸಮಾಜ ಕಲ್ಯಾಣ 16, 955 ಕೋಟಿಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ 51,300 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ : 1,080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆಎತ್ತಿನಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲು ಇಡಲಾಗಿದೆ.ಜಾನುವಾರುಗಳ ಸಾವಿಗೆ ಕೊಡುವ ಪರಿಹಾರದ ಮೊತ್ತ ಹೆಚ್ಚಳಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆ; 9 ಕೋಟಿ ರೂ. ಅನುದಾನ.10 ನಗರಗಳಲ್ಲಿ ಮಹಿಳೆಯರಿಂದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಜವಾಬ್ದಾರಿಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಪೀಠೋಪಕರಣ ಒದಗಿಸಲು 50 ಕೋಟಿ ರೂ. ಬಿಡುಗಡೆ.ಮಧ್ಯಾಹ್ನ ಉಪಹಾರ ಯೋಜನೆಯಡಿ 16,347 ಶಾಲೆಗಳ ಅಡುಗೆಮನೆ ನವೀಕರಣ ಹಾಗೂ ಪಾತ್ರೆ ಪರಿಕರ ಪೂರೈಕೆಗೆ 46 ಕೋಟಿ ರೂ.ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್. ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಭಾಗದ 50 ಶಾಲೆಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಡಲಾಗಿದೆ.ವಕ್ಫ್ ಮಂಡಳಿಗೆ ಅನುದಾನ ಘೋಷಣೆ : ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಅನುದಾನ ಘೋಷಿಸಲಾಗಿದೆಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಪಾಪನೆ,ಅಂಗನವಾಡಿ ಕಾರ್ಯಕರ್ತರ ಗೌರವ ಧನ ಹೆಚ್ಚಳ ಮಾಡಿದ್ದಾರೆ. ಬಜೆಟ್ ನಲ್ಲಿಅಲ್ಪಸಂಖ್ಯಾತರ ಸಮುದಾಯದ ಶಿಕ್ಷಣಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ಕೊಟ್ಟಿರುವುದಕ್ಕೆ ಹಾಗೂ ಹತ್ತು ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ಕೊಳಗೇರಿ ಅಭಿವೃದ್ಧಿ ಮಂಡಳಿ ಬಡವರಿಗೆ ನಿರ್ಮಿಸುತ್ತಿರುವ 1,80,253 ಮನೆ ಪೂರ್ಣ ಗೊಳಿಸಿ ಫಲಾನುಭವಿ ವಂತಿಗೆ ತಲಾ 5 ಲಕ್ಷ ಸರ್ಕಾರ ಭರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಕೃಷಿ, ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಅರೋಗ್ಯ ಕ್ಕೆ ಹೆಚ್ಚಿನ ಅನುದಾನ ಒದಗಿಸಿ ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದೆ.ರಾಜ್ಯದಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ಗಾಗಿ ಈಗಿರುವ ಎಂಟು ಪೊಲೀಸ್ ವಿಭಾಗಗಳ ಸಂಖ್ಯೆಯನ್ನು 11 ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗ ಬಲಗೊಳಿಸಲು 5 ಕೋಟಿ ಒದಗಿಸಲು ಘೋಷಣೆ ಮಾಡಲಾಗಿದೆ.ಇದು ಅವರ ದಾಖಲೆಯ 16ನೇ ಬಜೆಟ್ ಆಗಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ 4,09,549 ಕೋಟಿ ರೂ ದಾಖಲೆ ಗಾತ್ರದ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಎಲ್ಲರ ನೀರೀಕ್ಷೆಯಂತೆ ಈ ಬಾರಿಯೂ 5 ಗ್ಯಾರಂಟಿ ಯೋಜನೆಗಳಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ 51,300 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.ಒಟ್ಟಿನಲ್ಲಿ ಜನಮೆಚ್ಚಿದ ಅಹಿಂದ ನಾಯಕ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ಮಂಡಿಸಿದ 16 ನೇ ರಾಜ್ಯ ಬಜೆಟ್ ಸಮಸ್ತ ನಾಗರಿಕರ ಅಭಿವೃದ್ಧಿಗೆ ಮುನ್ನುಡಿಯಾಗಿದೆ ಎಂದು ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಪಾಲನಕರ ಜನಸ್ಪಂಧನೆಯನ್ನು ವ್ಯೆಕ್ತಪಡಿಸಿರುತ್ತಾರೆ.