ಬ್ರಾಹ್ಮಣ ಮಹಾಸಭಾ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಬ್ರಾಹ್ಮಣ ಸಮ್ಮೇಳನ

State Level Brahmin Conference organized by Brahmin Mahasabha at Palace Grounds, Bangalore

ಬ್ರಾಹ್ಮಣ ಮಹಾಸಭಾ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಬ್ರಾಹ್ಮಣ ಸಮ್ಮೇಳನ 

ಅಥಣಿ 20 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಬ್ರಾಹ್ಮಣ ಸಮ್ಮೇಳನದಲ್ಲಿ ಸ್ಥಳೀಯ ಹವ್ಯಾಸಿ ಸಂಗೀತ ಕಲಾವಿದೆ ಶ್ರೀಮತಿ ಸುಮೇಧಾ ಪ್ರಮೋದ ಮೀರಜ ಭಕ್ತಿ, ಭಾವ ಹಾಗೂ ಮರಾಠಿ ಅಭಂಗ ಹಾಡಿ ಪ್ರೇಕ್ಷಕರನ್ನು ರಂಜಿಸಿ ಮೆಚ್ಚುಗೆ ಪಡೆದುಕೊಂಡರು. ಇದೇ ಮೊದಲ ಬಾರಿಗೆ ಅಥಣಿಯ ಕಲಾವಿದರೊಬ್ಬರು ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶದಲ್ಲಿ ಸಂಗೀತ ಕಾರ್ಯಕ್ರಮ ನೀಡಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ. ಗಡಿ ಭಾಗದ ಅಥಣಿಯವಳಾದ ನನ್ನ ಕಲೆ ಮೆಚ್ಚಿ ನನಗೆ ರಾಜ್ಯಮಟ್ಟದ ಸಮ್ನೇಳನದಲ್ಲಿ ಹಾಡಲು ಅವಕಾಶ ಮಾಡಿಕೊಟ್ಟ ಮಹಾಸಭಾದ ರಾಜ್ಯ ಅಧ್ಯಕ್ಷ ಅಶೋಕ ಹಾರ್ನಳ್ಳಿಯವರಿಗೆ ಕೃತಜ್ಞತೆ ಸಲ್ಲಿಸಿದ ಸುಮೇಧಾ ಮೀರಜ, ಅವಕಾಶ ಬಂದಾಗ ನಮ್ಮ ಕಲೆಯನ್ನು ಪರಿಚಯಿಸುವ ಕಾರ್ಯಕ್ಕೆ ನಾವೆಲ್ಲ ಮುಂದಾಗಬೇಕಿದೆ ಎಂದು ಸ್ಥಳಿಯ ಕಲಾವಿದರನ್ನು ಪ್ರೋತ್ಸಾಹಿಸಿದರು. ಸಮ್ಮೇಳನದಲ್ಲಿ ಭಾಗವಹಿಸಿದ್ದ ಬ್ರಾಹ್ಮಣ ಮಹಾಸಭಾದ ಅಥಣಿ ತಾಲೂಕಾ ಕಾರ್ಯಾಧ್ಯಕ್ಷ ಡಾ.ವಿಜಯಕುಮಾರ ಚೈನಿ ಮಾತನಾಡಿ, ಅಥಣಿಯ ಕಲಾವಿದರೊಬ್ಬರಿಗೆ ಇಂತಹ ರಾಜ್ಯಮಟ್ಟದ ವೇದಿಕೆಯಲ್ಲಿ ಅವಕಾಶ ದೊರಕಿರುವುದು ನಮಗೆಲ್ಲ ಅಭಿಮಾನದ ಸಂಗತಿ ಎಂದರು.    ಕಾರ್ಯಕ್ರಮದಲ್ಲಿ ಸ್ಥಳೀಯ ನ್ಯಾಯವಾದಿ ಎನ್‌.ಕೆ.ಪಾಟೀಲ, ಪುರಸಭಾ ಸದಸ್ಯೆ ಮೃಣಾಲಿನಿ ದೇಶಪಾಂಡೆ, ಡಾ.ಪಿ.ಪಿ.ಮೀರಜ, ಡಾ.ವಾಣಿ ಚೈನಿ, ಸುನೀಲ ಕುಲಕರ್ಣಿ, ಸತೀಶ ಕುಲಕರ್ಣಿ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯಲ್ಲಿ ವಿಪ್ರ ಬಾಂಧವರು ಉಪಸ್ಥಿತರಿದ್ದರು.