ಭಾರತದ ಆರ್ಥಿಕ ವ್ಯವಸ್ಥೆ ಕುರಿತು ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆ
State Level Written Quiz Competition on Indian Economic System
ಗದಗ 03: ನಗರದ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗವು “ನೀತಿ ವೇದಿಕೆ” ಯಡಿಯಲ್ಲಿ ಪಿ.ಯು ಹಾಗೂ ಪದವಿ ವಿದ್ಯಾರ್ಥಿಗಳಿಗೆ ದಿ. 27 ರ ನವ್ಹಂಬರ 2025 ರಂದು ಭಾರತದ ಆರ್ಥಿಕ ವ್ಯವಸ್ಥೆ ಕುರಿತು ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಏರಿ್ಡಸಲಾಗಿತ್ತು. ಗದಗ ಸುತ್ತಮುತ್ತಲಿನ ಜಿಲ್ಲೆಗಳ ವಿವಿಧ ಮಹಾವಿದ್ಯಾಲಯಗಳಿಂದ ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕುಮಾರ ಆದಿತ್ಯ ಗೊರವರ ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗದಗ, ದ್ವಿತೀಯ ಸ್ಥಾನವನ್ನು ಕುಮಾರ ಮನೋಜ ಪಾಟೀಲ ಕರ್ನಾಟಕ ರಾಜ್ಯ ಕಾನೂನೂ ವಿಶ್ವವಿದ್ಯಾಲಯ ಹುಬ್ಬಳ್ಳಿ ಹಾಗೂ ತೃತೀಯ ಸ್ಥಾನವನ್ನು ಶ್ರೇಯಾ ಶೆಟ್ಟಿ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯ ಗದಗ ಹಾಗೂ ಕುಮಾರಿ ಪ್ರೇಮಾ ಮಲಗೋಡ ಜ.ಫ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿರಹಟ್ಟಿ ಇವರು ಪಡದುಕೊಂಡಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎ.ಕೆ.ಮಠ ಅವರು ತಿಳಿಸಿದ್ದಾರೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿಜೇತ ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ, ವಿವಿಧ ಮಹಾವಿದ್ಯಾಲಯಗಳ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಿಗೆ ಮಹಾವಿದ್ಯಾಲಯದ ಪ್ರಾಚಾರ್ಯರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 