ಬೆಳಗಾವಿ 11: ಲಿಂಗರಾಜ ಪ-ಪೂ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ. ಕಲಾ ವಿಭಾಗದ ವಿದ್ಯಾಥರ್ಿಯಾದ ಕುಮಾರ ಸಮರ್ಥ ಸಾಲಿಮಠ ಇವರು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಯುವ ಸಂಸತ್ ಸ್ಪಧರ್ೆ 2019-20 ರಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಸ್ಪಧರ್ೆಯಲ್ಲಿ ವಿವಿಧ ಜಿಲ್ಲೆಯ ಒಟ್ಟು 62 ವಿದ್ಯಾಥರ್ಿಗಳು ಭಾಗವಹಿಸಿದ್ದರು. ವಿಶ್ವೇಶ್ವರ ಹೆಗಡೆ ಕಾಗೆರಿ, ಮಾನ್ಯ ಸಭಾಪತಿಗಳು, ಕನರ್ಾಟಕ ವಿಧಾನ ಸಭೆ ಇವರು ಪಾರಿತೋಷಕ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದ್ದಾರೆ. ವಿದ್ಯಾಥರ್ಿಯ ಈ ಸಾಧನೆಗೆ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.