ಕೊಪ್ಪಳ 23: ಕೊಪ್ಪಳ ಜಿಲ್ಲಾ ಮಟ್ಟದ ರಾಜ್ಯ ಸಕರ್ಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೊಬೆಷನರಿ ಐಎಎಸ್ ಅಧಿಕಾರಿ ಅಕ್ಷಯ ಶ್ರೀಧರ್ ಅವರು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನರ್ಾಟಕ ರಾಜ್ಯ ಸಕರ್ಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ "ಜಿಲ್ಲಾ ಮಟ್ಟದ ಸಕರ್ಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಶನಿವಾರದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ಪ್ರೊಬೆಷನರಿ ಐಎಎಸ್ ಅಧಿಕಾರಿ ಅಕ್ಷಯ ಶ್ರೀಧರ್ ಅವರು ಮಾತನಾಡಿ, ಸಕರ್ಾರಿ ನೌಕರರು ವರ್ಷಪೂತರ್ಿ ಕೆಲಸ ಮಾಡುತ್ತಿದ್ದು, ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಅದಕ್ಕಾಗಿ ಎಲ್ಲರೂ ಕ್ರೀಡಾ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.
ಸಕರ್ಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ ಪ್ರಾಸ್ತಾವಿಕವಾಗಿ ಮಾತನಾಡಿ, ಸಕರ್ಾರಿ ನೌಕರರು ಪ್ರತಿನಿತ್ಯ ಸಾರ್ವಜನಿಕರ ಸೇವೆ ಹಾಗೂ ಸಂವಿಧಾನದ ಅಂಗವಾದ ಕಾಯರ್ಾಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಕರ್ಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುತ್ತಿದ್ದಾರೆ. ದೇಶದ ಆಥರ್ಿಕತೆಯಲ್ಲಿ ರಾಜ್ಯ 2ನೇ ಸ್ಥಾನ ಪಡೆದಿದೆ. ಅಲ್ಲದೇ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದಕ್ಕೆ ಕೆಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಕರ್ಾರಿ ನೌಕರರು ಕಾರಣ ವಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ವಿರೂಪಾಕ್ಷರಡ್ಡಿ ಮಾದಿನೂರು, ಕುಟುಂಬ ಕಲ್ಯಾಣ ಅಧಿಕಾರಿ ಬಂಬಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಕೃಷ್ಣಮೂತರ್ಿ ದೇಸಾಯಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿದರ್ೆಶಕ ಆರ್.ಜಿ.ನಾಡಗೇರ ಸೇರಿದಂತೆ ಕನರ್ಾಟಕ ರಾಜ್ಯ ಸಕರ್ಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.