ಯೂರಿಯಾ, ರಸಗೊಬ್ಬರ ಅಭಾವಕ್ಕೆ ರಾಜ್ಯ ಸರಕಾರವೇ ಕಾರಣ: ಶ್ರೀಶೈಲಗೌಡ ಕಿಡಿ
State government is responsible for shortage of urea and fertilizer: Srisailagowda Kidi
ಯೂರಿಯಾ, ರಸಗೊಬ್ಬರ ಅಭಾವಕ್ಕೆ ರಾಜ್ಯ ಸರಕಾರವೇ ಕಾರಣ: ಶ್ರೀಶೈಲಗೌಡ ಕಿಡಿ
ಸಿಂದಗಿ 07: ರಾಜ್ಯದಲ್ಲಿ ಯೂರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರ ಸರ್ಕಾರದ ಮೇಲೆ ಕಿಡಿಕಾರಿದರು .
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಈ ಬಾರಿ ಸರ್ಕಾರದ ಅಸಹಕಾರ ಮತ್ತು ನಿರ್ಲಕ್ಷ್ಯದಿಂದ ಯೂರಿಯಾ ಗೊಬ್ಬರ ಅಭಾವ ಉಂಟಾಗಿದ್ದು, ಇದರಿಂದ ಕೆಲವು ಕಡೆಗಳಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗುತ್ತಿದೆ. ಇನ್ನೂ ಅನೇಕ ಕಡೆಗಳಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮುಂಗಾರು ಪ್ರಾರಂಭದಲ್ಲೇ ಮಳೆಯ ಹವಾಮಾನ ವೈಪರೀತ್ಯವನ್ನು ತಜ್ಞರಿಂದ ಮಾಹಿತಿ ಪಡೆದು ಹೆಚ್ಚಿನ ದಾಸ್ತಾನು ತರಿಸಲು ಮುತುವರ್ಜಿ ವಹಿಸಬೇಕಾಗಿತ್ತು, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ, ಈಗಲೂ ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಒಂದು ವಾರದೊಳಗಡೆ ಹೆಚ್ಚಿನ ದಾಸ್ತಾನು ತರಿಸುವ ಮೂಲಕ ರೈತರಿಗೆ ನೆರವಾಗುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 